2022ರ ಹುಬ್ಬಳ್ಳಿ ಹಿಂಸಾಚಾರ ಪ್ರಕರಣ: ಆರೋಪಿಗಳನ್ನು ಬಿಡಿಸಲು ಮುಂದಾಯಿತೇ ಕಾಂಗ್ರೆಸ್ ಸರ್ಕಾರ..?!
ಬೆಂಗಳೂರು: 2022ರಲ್ಲಿ ನಡೆದ ಹುಬ್ಬಳ್ಳಿ ಹಿಂಸಾಚಾರ ಪ್ರಕರಣದಲ್ಲಿ ಆರೋಪಿಗಳ ಮೇಲೆ ಇದ್ದಂತಹ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಕರ್ನಾಟಕ ಸರ್ಕಾರ ತೀರ್ಮಾನಿಸಿದೆ. ಈ ನಿರ್ಧಾರವು ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ನಡುವೆ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ಈ ಕ್ರಮವನ್ನು ಕಠಿಣವಾಗಿ ಟೀಕಿಸಿದೆ.
2022 ಏಪ್ರಿಲ್ 16 ರಂದು ಹುಬ್ಬಳ್ಳಿ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದ ಜನರನ್ನು ಗುರಿಯಾಗಿಸಿ ಪ್ರಕರಣ ದಾಖಲಾಗಿತ್ತು. ಸಾಮಾಜಿಕ ಜಾಲತಾಣದ ಪೋಸ್ಟ್‌ಗೆ ಸಂಬಂಧಿಸಿದಂತೆ ಹಿಂಸಾಚಾರ ಉಂಟಾಗಿತ್ತು. ಆರೋಪಿಗಳು ಕೊಲೆ ಯತ್ನ, ಹಿಂಸೆಗೆ ಪ್ರಚೋದನೆ ನೀಡುವಂತ ದೋಷಾರೋಪಗಳನ್ನು ಎದುರಿಸುತ್ತಿದ್ದಾರೆ.
ಬಿಜೆಪಿ ವಿರೋಧ:
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಸಿ.ಎನ್. ಅಶ್ವತ್ಥ ನಾರಾಯಣ ಅವರು ಈ ನಿರ್ಧಾರವನ್ನು ತೀವ್ರವಾಗಿ ವಿರೋಧಿಸಿದ್ದಾರೆ. “ಇದು ಮತ ತಾರತಮ್ಯದ ರಾಜಕಾರಣದ ಗರಿಷ್ಠ ಮಟ್ಟವಾಗಿದೆ” ಎಂದು ಅವರು ಹೇಳಿದ್ದಾರೆ.
ಕಾಂಗ್ರೆಸ್ ಪ್ರತ್ಯುತ್ತರ:
ಈಗಾಗಲೇ ಕಾಂಗ್ರೆಸ್ ಸರ್ಕಾರವು ಈ ಆರೋಪಗಳನ್ನು ತಳ್ಳಿ ಹಾಕಿದ್ದು, ಇವು ರಾಜಕೀಯ ಪ್ರೇರಿತ ಪ್ರಕರಣಗಳಾಗಿದ್ದು, ವಾಪಸ್ ಪಡೆಯಲು ತೀರ್ಮಾನ ಮಾಡಲಾಗಿದೆ ಎಂದು ಹೇಳಿದ್ದಾರೆ. ಕನ್ನಡ ಹೋರಾಟಗಾರರು ಮತ್ತು ರೈತ ಮುಖಂಡರ ಮೇಲಿನ ಹಳೆಯ ಪ್ರಕರಣಗಳನ್ನೂ ವಾಪಸ್ ಪಡೆಯಲಾಗಿದೆ ಎಂದು ಕಾಂಗ್ರೆಸ್ ತಿಳಿಸಿದೆ.