Bengaluru

ಉತ್ತರ ಕನ್ನಡದಲ್ಲಿ ಭೂಕುಸಿತಕ್ಕೆ ಬಲಿಯಾದವರಿಗೆ ಸರ್ಕಾರದಿಂದ ತಲಾ ₹5 ಲಕ್ಷ ಪರಿಹಾರ.

ಉತ್ತರ ಕನ್ನಡ: ನಿನ್ನೆ ಮಂಗಳವಾರ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡ ಕುಸಿತ ಸಂಭವಿಸಿತ್ತು. ಈ ದುರ್ಘಟನೆಯಲ್ಲಿ ಹಲವು ಮಂದಿ ಜೀವ ಕಳೆದುಕೊಂಡಿದ್ದಾರೆ. ಸರ್ಕಾರ ಮೃತಪಟ್ಟವರ ಕುಟುಂಬಕ್ಕೆ ತಲಾ ₹5 ಲಕ್ಷ ರೂಪಾಯಿ ಪರಿಹಾರ ನೀಡುತ್ತಿದೆ.

“ಅಂಕೋಲಾ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತದ ಅವಘಡದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು.” ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ಮೃತರ ಕುಟುಂಬಕ್ಕೆ ಪರಿಹಾರ ನೀಡುವುದು ಒಳ್ಳೆಯದೇ ಹೌದು. ಆದರೆ ಐಆರ್‌ಬಿ ಅಂತಹ ಬೃಹತ್ ರಸ್ತೆ ನಿರ್ಮಾಣ ಕಂಪೆನಿಗಳಿಗೆ, ಪಶ್ಚಿಮ ಘಟ್ಟಗಳ ಕುರಿತ ವೈಜ್ಞಾನಿಕ ಜ್ಞಾನವನ್ನು ಬೆಳೆಸುವುದು ಅಷ್ಟೇ ಮುಖ್ಯ. ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಂಡರೆ, ಭವಿಷ್ಯದಲ್ಲಿ ಸಂಭವಿಸುವಂತ ಅನಾಹುತಗಳಿಂದ ಕಡಲ ಜನರನ್ನು ಪಾರು ಮಾಡಿದಂತೆ ಆಗುತ್ತದೆ.

Show More

Related Articles

Leave a Reply

Your email address will not be published. Required fields are marked *

Back to top button