ಉತ್ತರ ಕನ್ನಡಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ.
![](https://akeynews.com/wp-content/uploads/2024/03/thumbnail-for-Akey-news-Final-5-1-780x470.jpg)
ನವದೆಹಲಿ: 2024ನೇ ಲೋಕಸಭಾ ಚುನಾವಣೆಗೆ ತನ್ನ 5ನೇ ಅಭ್ಯರ್ಥಿ ಪಟ್ಟಿಯನ್ನು ಬಿಡುಗಡೆ ಮಾಡಿದ ಭಾರತೀಯ ಜನತಾ ಪಕ್ಷ, ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕದ ಲೋಕಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಸೂಚಿಸಿದೆ.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಯಾವ ಅಭ್ಯರ್ಥಿಯನ್ನ ಭಾರತೀಯ ಜನತಾ ಪಕ್ಷ ಸೂಚಿಸಲಿದೆ ಎಂಬ ಕುತೂಹಲ ರಾಜ್ಯದ ಜನರಲ್ಲಿ ಕಾತುರ ಹುಟ್ಟಿಸಿತ್ತು. ಈ ಹಿಂದೆ ಸಂಸದರಾಗಿದ್ದ ಶ್ರೀ ಅನಂತಕುಮಾರ್ ಹೆಗಡೆ ಅವರ ಹೆಸರು ತನ್ನ ನಾಲ್ಕನೇ ಪಟ್ಟಿಯಲ್ಲೂ ಸಹ ಸೂಚಿಸದೆ ಇರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು.
ಆದರೆ ಈ ಎಲ್ಲಾ ಅನುಮಾನಗಳಿಗೆ ಭಾರತೀಯ ಜನತಾ ಪಕ್ಷ ತೆರೆ ಎಳೆದಿದೆ. ತನ್ನ 5ನೇ ಅಭ್ಯರ್ಥಿ ಪಟ್ಟಿಯಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯ ಹೆಸರನ್ನು ತಿಳಿಸಿದೆ. ಮಾಜಿ ವಿಧಾನಸಭಾ ಸ್ಪೀಕರ್ ಹಾಗೂ ಶಿರಸಿ ಮತ್ತು ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ತಮ್ಮ ಮುಂದಿನ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿ ಕಣಕ್ಕಿಳಿಸಿದೆ.
‘ಹಿಂದೂ ಫೈಯರ್ ಬ್ರಾಂಡ್’ ಎಂದೇ ಖ್ಯಾತಿಯಾಗಿದ್ದ ಶ್ರೀ ಅನಂತ್ ಕುಮಾರ್ ಹೆಗಡೆ ಅವರು ಈ ಬಾರಿಯ ಲೋಕಸಭಾ ಚುನಾವಣೆಯ ಟಿಕೆಟ್ನ್ನು ಕಳೆದುಕೊಂಡಿದ್ದಾರೆ. ಇವರ ವಿರುದ್ಧ ಉತ್ತರಕನ್ನಡ ಬಿಜೆಪಿ ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ. ಹಾಗೆಯೇ ಇವರ ವಿವಾದಾತ್ಮಕ ಹೇಳಿಕೆಗಳಿಂದ ಇವರಿಗೆ ಟಿಕೆಟ್ ಕೈ ತಪ್ಪಿರಬಹುದು ಎಂದು ಊಹಿಸಲಾಗಿದೆ.