Politics
ಬಿ.ಎಸ್. ಯಡಿಯೂರಪ್ಪ ಬಂಧನ?!
ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ಪೋಕ್ಸೋ ಪ್ರಕರಣದ ದಾಖಲಾಗಿದೆ. ಈ ಕುರಿತಂತೆ ನಿನ್ನೆ ದಿನಾಂಕ ಜೂನ್ 13 ರಂದು ವಿಶೇಷ ನ್ಯಾಯಾಲಯ ಯಡಿಯೂರಪ್ಪ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿತ್ತು.
ಈ ಕುರಿತಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.”ಯಡಿಯೂರಪ್ಪ ಅವರನ್ನು ಸೋಮವಾರ ದೆಹಲಿಯಿಂದ ಕರೆತರಲಾಗುವುದು.” ಎಂದು ಹೇಳಿದ್ದಾರೆ.
ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಬಾಲಕಿ ಹಾಗೂ ಅವಳ ತಾಯಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಳಿ ಸಹಾಯ ಕೇಳಿ ಬಂದಾಗ, ಬಾಲಕಿಯನ್ನು ಕೊಠಡಿಗೆ ಕರೆದೊಯ್ದು ಆಕೆಯ ವಕ್ಷಸ್ಥಳ ಹಿಸುಕಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ರಾಜ್ಯ ಪ್ರಾಸಿಕ್ಯೂಷನ್ ನಗರದ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇಳಿ ವಯಸ್ಸಿನಲ್ಲಿ ಈ ರೀತಿಯ ಹಗರಣಗಳು ಮಾಜಿ ಮುಖ್ಯಮಂತ್ರಿಗಳಿಗೆ ಶೋಭೆ ತರುವಂತದಲ್ಲ ಎಂಬುದು ಜನರ ಅಭಿಪ್ರಾಯ.