BengaluruHealth & Wellness
ಡೆಂಗ್ಯೂ ಜ್ವರ ಪತ್ತೆ ಪರೀಕ್ಷೆಗೆ ಸರ್ಕಾರದಿಂದ ದರ ನಿಗದಿ. ಯಾವ ಪರೀಕ್ಷೆಗೆ ಎಷ್ಟು ದರ?!
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಮಹಾಮಾರಿ ತಾಂಡವವಾಡುತ್ತಿದೆ. ಈ ರೋಗಕ್ಕೆ ಪ್ರತಿದಿನ ಹಲವಾರು ಜನರು ಬಲಿಯಾಗುತ್ತಿದ್ದಾರೆ. ಇದರ ಹರಡುವಿಕೆಯನ್ನು ತಡೆಯಲು ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಈಗಾಗಲೇ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ, ಡೆಂಗ್ಯೂ ರೋಗದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಸೊಳ್ಳೆ ಉತ್ಪತ್ತಿಯಾಗುವ ಮೂಲಗಳನ್ನು ತೊಡೆದುಹಾಕಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಆದರೂ ಸಹ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ.
ರಾಜ್ಯ ಸರ್ಕಾರ ಇಂದು ಡೆಂಗ್ಯೂ ಜ್ವರ ಪತ್ತೆ ಪರೀಕ್ಷೆಗೆ ದರ ನಿಗದಿ ಮಾಡಿದೆ.
- ಎಲಿಸಾ ಪರೀಕ್ಷೆಗೆ ₹300
- ರಾಪಿಡ್ ಪರೀಕ್ಷೆಗೆ ₹250
ಖಾಸಗಿ ಆಸ್ಪತ್ರೆಗಳು, ಪ್ರಯೋಗ ಶಾಲೆಗಳು ಹಾಗೂ ಡಯಾಗ್ನೋಸ್ಟಿಕ್ ಲ್ಯಾಬೋರೇಟರಿಗಳು ಸೇರಿದಂತೆ ರಾಜ್ಯದ್ಯಂತ ಏಕರೂಪದ ದರ ಕಡ್ಡಾಯಗೊಳಿಸಿ ಆದೇಶವನ್ನು ರಾಜ್ಯ ಸರ್ಕಾರ ನೀಡಿದೆ. ಇದರಿಂದ ಸಾಮಾನ್ಯ ಜನರನ್ನು ಸುಲಿಗೆ ಮಾಡುವ ಕೆಟ್ಟ ಕಾರ್ಯಕ್ಕೆ ತಡೆ ತಂದಂತಾಗಿದೆ.