BengaluruPolitics

‘ರಾಮ’ನಗರ ಹೆಸರು ಬದಲಾವಣೆ; ಕೋಮು ಕಿಡಿ ಹೊತ್ತಿಸಿದ ಸರ್ಕಾರ?!

ಬೆಂಗಳೂರು: ರೇಷ್ಮೆ ನಗರ ರಾಮನಗರ ಜಿಲ್ಲೆಯ ಹೆಸರನ್ನು ಬದಲಾಯಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂಬ ಸುದ್ದಿ ರಾಜ್ಯದಲ್ಲಿ ಹರಿದಾಡುತ್ತಿದೆ. ಈ ನಿರ್ಣಯಕ್ಕೆ ರಾಜ್ಯದ ವಿರೋಧ ಪಕ್ಷಗಳಾದಂತಹ ಜೆಡಿಎಸ್ ಹಾಗೂ ಬಿಜೆಪಿ ತೀವ್ರ ವಿರೋಧವನ್ನು ವ್ಯಕ್ತಪಡಿಸಿದೆ.

ಇದರ ಕುರಿತು ಮಾತನಾಡಿದ ಕೇಂದ್ರ ಸಚಿವರಾದ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು “ಕಾಂಗ್ರೆಸ್ ನವರು ಈಗ ಜಿಲ್ಲೆಯ ಹೆಸರನ್ನು ಬದಲಾವಣೆ ಮಾಡಬಹುದು, ಮತ್ತೆ ನಾನು ರಾಜ್ಯದಲ್ಲಿ ಅಧಿಕಾರಕ್ಕೆ ಬಂದೇ ಬರುತ್ತೇನೆ. ಆಗ ಇವರು ಇಟ್ಟಿರುವ ಹೆಸರನ್ನು ಕಿತ್ತೆಸೆಯುತ್ತೇನೆ.” ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಇನ್ನು ಮುಂದುವರೆದು,”ರಾಮನಗರ ಜಿಲ್ಲೆ ಮಾಡಿದ್ದ ಉದ್ದೇಶ ಈ ವ್ಯಕ್ತಿಗೆ ಏನು ಗೊತ್ತಿದೆ? ರಾಮನ ಹೆಸರು ಇರುವುದು ಒಂದು ಭಾಗ. ಈ ಜಿಲ್ಲೆಗೆ ತನ್ನದೇ ಆದ ಒಂದು ಇತಿಹಾಸವಿದೆ. ಪುರಾಣ ಐತಿಹ್ಯವಿದೆ. ಈ ಹೆಸರಿನಲ್ಲಿ ರಾಮನ ಹೆಸರು ಇದೆ. ರಾಮ ದೇವರಿಗೆ ಇವರು ಅಪಚಾರ ಮಾಡಲು ಹೊರಟಿದ್ದಾರೆ.” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದರ ಜೊತೆ ಭಾರತೀಯ ಜನತಾ ಪಕ್ಷದ ಮುಖಂಡರಾದ ಆರ್.ಅಶೋಕ್ ಅವರು, “ರಾಮನಗರದಲ್ಲಿ ‘ರಾಮ’ನಿದ್ದಾನೆ ಎಂಬ ದ್ವೇಷವೂ ಅಥವಾ ರಿಯಲ್ ಎಸ್ಟೇಟ್ ಕುಬೇರರಾಗುವ ದುರಾಸೆಯೋ?

ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡುವ
ಕಾಂಗ್ರೆಸ್ ಸರ್ಕಾರದ ಸಂಚಿನ ಹಿಂದೆ ರಾಮ ದ್ವೇಷ, ರಿಯಲ್ ಎಸ್ಟೇಟ್ ಲಾಲಸೆ ಅಡಗಿರುವುದು ಸುಸ್ಪಷ್ಟವಾಗಿದೆ.” ಎಂದು ತಮ್ಮ ಎಕ್ಸ್ ಖಾತೆಯ ಮೂಲಕ ಕಿಡಿಕಾರಿದ್ದಾರೆ.

ಕಾಂಗ್ರೆಸ್ ಪಕ್ಷದ ರಾಮ ದ್ವೇಷವೇ ರಾಮನಗರದ ಹೆಸರನ್ನು ಬದಲಾಯಿಸಲು ಇರುವ ಮೂಲ ಉದ್ದೇಶವೇ? ಅಥವಾ ಇದರ ಹಿಂದೆ ಕಾಣದ ಕಾರಣಗಳು ಇವೆಯೇ?

Show More

Leave a Reply

Your email address will not be published. Required fields are marked *

Related Articles

Back to top button