ಶೋಕಾಸ್ ನೋಟಿಸ್: ರಾಜ್ಯಪಾಲರನ್ನು ‘ಕೈಗೊಂಬೆ’ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ.
ಬೆಂಗಳೂರು: ಮುಡಾ ಹಗರಣದ ಸುಳಿಯಲ್ಲಿ ಸಿಕ್ಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ, ರಾಜ್ಯ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಶೋಕಾಸ್ ನೋಟಿಸ್ ನೀಡುವ ಮೂಲಕ ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ರಾಜ್ಯಪಾಲರ ಈ ನಡೆಯನ್ನು ವಿರೋಧಿಸಿದ ಸಿದ್ದರಾಮಯ್ಯನವರು, ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.
ಈ ಕುರಿತು ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ತನಿಖೆ ನಡೆಯುತ್ತಿರುವ ಸಂದರ್ಭದಲ್ಲಿ ಈ ರೀತಿಯ ಶೋಕಾಸ್ ನೋಟಿಸ್ ರಾಜ್ಯಪಾಲರಿಂದ ಬರುವುದು ಅಸಂವಿಧಾನಿಕ, ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯ ಕಗ್ಗೊಲೆ ಎಂದು ರಾಜ್ಯಪಾಲರ ವಿರುದ್ಧ ಆರೋಪಿಸಿದರು. ಅದೇ ರೀತಿ ಗೃಹ ಸಚಿವ ಪರಮೇಶ್ವರ ಪ್ರತಿಕ್ರಿಯಿಸಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೀಡುವ ನೋಟಿಸ್ ಕುರಿತಂತೆ, ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿರುವುದರಿಂದ ಮುಖ್ಯಮಂತ್ರಿಗಳಿಗೆ ಹಾಜರಾಗದಂತೆ ಸಚಿವರು ಮನವಿ ಮಾಡಿದ್ದಾರೆ ಎಂದು ತಿಳಿಸಿದರು.
“ಕಾನೂನು ರೀತ್ಯಾ ಅವರು (ರಾಜ್ಯಪಾಲರು) ನೀಡಿಲ್ಲ. ತಪ್ಪು ಮಾಡಿದ್ದರೆ ಹೆದರಬೇಕು. ನಾನು ತಪ್ಪು ಮಾಡಿಲ್ಲ.” ಎಂದು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರೆದುಕೊಂಡಿದ್ದಾರೆ. ಇದು ಹಗರಣಗಳ ಮಧ್ಯೆ ಅವರ ಅವರ ಅಚಲವಾದ ಆತ್ಮವಿಶ್ವಾಸವನ್ನು ತೋರುತ್ತದೆ.