Bengaluru
ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ: ಹೈಕೋರ್ಟ್ ಆದೇಶದವರೆಗೆ ದಂಡ ವಿಧಿಸಬಹುದೇ..?!
ಬೆಂಗಳೂರು: ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಕೆ ಕುರಿತ ವಿವಾದವು ಹೈಕೋರ್ಟ್‌ನಲ್ಲಿ ಸೆಪ್ಟೆಂಬರ್ 18 ರಂದು ವಿಚಾರಣೆಗೆ ಬರಲಿದ್ದು, ಅಲ್ಲಿಯವರೆಗೆ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸದಿದ್ದರೆ ದಂಡ ವಿಧಿಸದಿರಲು ಕರ್ನಾಟಕ ಸರ್ಕಾರದ ಸಾರಿಗೆ ಇಲಾಖೆ ತೀರ್ಮಾನಿಸಿದೆ.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, “ಎಚ್‌ಎಸ್‌ಆರ್‌ಪಿ ಅಳವಡಿಕೆಯ ಮೂರು ತಿಂಗಳ ಅವಧಿ ಈಗ ಮುಗಿದಿದ್ದು, ಹೈಕೋರ್ಟ್ ಆದೇಶದವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ” ಎಂದು ಹೇಳಿದ್ದಾರೆ.
ಹೈಕೋರ್ಟ್ ವಿಚಾರಣೆ ನಂತರವೇ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿದುಬಂದಿದೆ. ಈ ವಿಚಾರಣೆಗಾಗಿ ಸಾರ್ವಜನಿಕರು ಕಾಯುತ್ತಿರುವುದರಿಂದ, ಸರ್ಕಾರದ ಮುಂದಿನ ಕ್ರಮ ಬಗ್ಗೆ ಕುತೂಹಲ ಹೆಚ್ಚಾಗಿದೆ.