70 ವರ್ಷದ ವೃದ್ಧನಿಂದ ಅಪ್ರಾಪ್ತೆ ಮೇಲೆ ಲೈಂಗಿಕ ಕಿರುಕುಳ: ವೀಡಿಯೋ ನೋಡಿ ಆಕ್ರೋಶ ವ್ಯಕ್ತಪಡಿಸಿದ ಜನರು!
ಸೀತಾಪುರ: ಉತ್ತರ ಪ್ರದೇಶದ ಸೀತಾಪುರದಲ್ಲಿ ಮಂಗಳವಾರ ಮಧ್ಯಾಹ್ನ ಸಂಚಲನ ಮೂಡಿಸುವ ಘಟನೆ ನಡೆದಿದೆ. 70 ವರ್ಷದ ಮೊಹ್ಮದ್ ಅನ್ವರ್, ತನ್ನ ಅಂಗಡಿಗೆ ಬಂದ ಅಪ್ರಾಪ್ತ ಆದಿವಾಸಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜನತೆ ಆಘಾತಗೊಂಡಿದ್ದಾರೆ. ಈ ಅಮಾನವೀಯ ಕೃತ್ಯ ದೇಶಾದ್ಯಂತ ಆಕ್ರೋಶ ಹುಟ್ಟಿಸಿದೆ.
ಇದೀಗ ಸಿದ್ಧವಾಗಿದೆ ಕಠಿಣ ಕಾನೂನು ಕ್ರಮ:
ಯೋಗಿ ಆದಿತ್ಯನಾಥ್ ಆದೇಶದಂತೆ ಉತ್ತರ ಪ್ರದೇಶ ಪೊಲೀಸ್ ತಂಡ ಕೂಡಲೇ ಕಾರ್ಯಾಚರಣೆ ನಡೆಸಿ, ಆರೋಪಿ ಅನ್ವರ್ ಖಾನ್‌ನ್ನು ಪೋಕ್ಸೋ ಕಾಯ್ದೆ ಹಾಗೂ ಎಸ್ಸಿ-ಎಸ್ಟಿ ಕಾಯ್ದೆ ಅಡಿಯಲ್ಲಿ ಬಂಧಿಸಿದ್ದಾರೆ. ಕಠಿಣ ಕ್ರಮ ಕೈಗೊಂಡಿರುವ ಪೊಲೀಸರು, ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಇಂತಹ ಕೃತ್ಯಗಳನ್ನು ತಡೆಯಲು ಜನರು ನಿರೀಕ್ಷಿಸುತ್ತಿರುವ ಕಠಿಣ ಶಿಕ್ಷೆಯನ್ನು ನೀಡಲು ಮುಂದಾಗಿದ್ದಾರೆ.
ಕಿರಾತಕ ಮನಸ್ಥಿತಿ:
ಬಾಲಕಿ ಮನೆಯ ವಸ್ತುಗಳನ್ನು ಕೊಂಡುಕೊಳ್ಳಲು ಅಂಗಡಿಗೆ ಬಂದಾಗ ಈ ಕೃತ್ಯ ನಡೆದಿದೆ. ಈ ಕೃತ್ಯದ ವಿಡಿಯೋ ವೈರಲ್ ಆದ ನಂತರ, ಜನರು ಆರೋಪಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಕರಣದ ತೀವ್ರತೆಯು ಹೆಚ್ಚುತ್ತಿರುವಾಗ, ಅಪರಾಧಿಗೆ ಕಠಿಣ ಶಿಕ್ಷೆ ಅನಿವಾರ್ಯ ಎಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.
ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚುತ್ತಿವೆ ಜನರಲ್ಲಿ ಕಳವಳ:
ಈ ಘಟನೆ ಉತ್ತರ ಪ್ರದೇಶದಲ್ಲಿ ಮಹಿಳಾ ಮತ್ತು ಮಕ್ಕಳ ಸುರಕ್ಷತೆಯ ಪ್ರಶ್ನೆಯನ್ನು ಮತ್ತೊಮ್ಮೆ ಎತ್ತಿದೆ. ಅನೇಕರು ಮಹಿಳಾ ಸುರಕ್ಷತೆಯ ಮೇಲಿನ ದೃಷ್ಠಿಕೋನಗಳನ್ನು ಪುನಃ ಪರಾಮರ್ಶಿಸುವ ಅಗತ್ಯವಿದೆ ಎಂದು ಒತ್ತಾಯಿಸುತ್ತಿದ್ದಾರೆ. ಇಂತಹ ಕೃತ್ಯಗಳು ಸಮಾಜದಲ್ಲಿ ಮಹಿಳಾ ಸುರಕ್ಷತೆಗೆ ತೀವ್ರ ಧಕ್ಕೆಯನ್ನುಂಟುಮಾಡುತ್ತವೆ.
ಆರೋಪಿಯನ್ನು ಈಗ ಜೈಲಿನಲ್ಲಿ ಹಿಡಿದಿಡಲಾಗಿದೆ. ಮುಂದಿನ ದಿನಗಳಲ್ಲಿ ನ್ಯಾಯಾಲಯದ ಮುಂದೆ ನಡೆಯುವ ವಿಚಾರಣೆಯಲ್ಲಿ ಅನುಸರಿಸಬೇಕಾದ ಕಠಿಣ ಕ್ರಮಗಳು ಜನರಲ್ಲಿ ತೃಪ್ತಿ ಮೂಡಿಸಬೇಕಾದ ಅವಶ್ಯಕತೆ ಇದೆ.