IndiaPolitics

ನರೇಂದ್ರ ಮೋದಿಯವರ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ಯಾರು?

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿಯವರು 2024 ರ ಲೋಕಸಭಾ ಚುನಾವಣೆಯಲ್ಲಿ ಪ್ರತಿ ಬಾರಿಯಂತೆ ಈ ಬಾರಿಯೂ ಕೂಡ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಇವರ ವಿರುದ್ಧವಾಗಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ಅವರು ಕಣಕ್ಕೆ ಇಳಿದಿದ್ದಾರೆ.

ಅಜಯ್ ರಾಯ್ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಮುಖಂಡರಾಗಿದ್ದು, ಉತ್ತರ ಪ್ರದೇಶ ರಾಜ್ಯದಲ್ಲಿ ಐದು ಬಾರಿ ವಿಧಾನಸಭಾ ಶಾಸಕರಾಗಿ ಗೆದ್ದಿರುತ್ತಾರೆ. ಇವರು ಪ್ರಸ್ತುತ ಉತ್ತರ ಪ್ರದೇಶ ಕಾಂಗ್ರೆಸ್‌ನ ಮುಖ್ಯಸ್ಥರಾಗಿದ್ದಾರೆ.

ಮೂಲತಃ ವಾರಣಾಸಿಯವರಾದ ಇವರು, ತಮ್ಮ ರಾಜಕೀಯ ಜೀವನವನ್ನು ಭಾರತೀಯ ಜನತಾ ಪಕ್ಷದ ವಿದ್ಯಾರ್ಥಿ ಒಕ್ಕೂಟದಿಂದ ಪ್ರಾರಂಭಿಸಿದರು. 1996 ರಿಂದ 2007 ರ ತನಕ ಬಿಜೆಪಿಯ ಟಿಕೆಟ್ ನಿಂದ ಮೂರು ಬಾರಿ ಕೊಲಸ್ಲಾ ವಿಧಾನಸಭಾ ಕ್ಷೇತ್ರದಿಂದ ಗೆದ್ದಿದ್ದರು.

2009ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣ ಬಿಜೆಪಿಯನ್ನು ತೊರೆದು ಸಮಾಜವಾದಿ ಪಕ್ಷವನ್ನು ಸೇರಿದರು. ಆದರೆ 2009ರ ಲೋಕಸಭಾ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ್ದರು. ತದನಂತರ 2009 ರ ವಿಧಾನಸಭಾ ಉಪಚುನಾವಣೆಯಲ್ಲಿ ಕೊಲಸ್ಲಾ ವಿಧಾನಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದು ಬಂದರು.

2012 ರಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಿದ ಅಜಯ್ ರಾಯ್ ಅವರು ಹೊಸದಾಗಿ ಸೃಷ್ಟಿಯಾದ ಪಿನ್ಡ್ರಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದರು. ಇದಾದ ನಂತರ ವಾರಣಾಸಿಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ, ನರೇಂದ್ರ ಮೋದಿಯವರನ್ನು 2014 ಮತ್ತು 2019ರ ಲೋಕಸಭಾ ಚುನಾವಣೆಯಲ್ಲಿ ಎದುರಿಸಿ ಸೋಲನ್ನು ಕಂಡಿದ್ದರು.

2022ರ 18ನೇ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ ಅಜಯ್ ರಾಯ್ ಅವರು 2024ರ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ಎದುರಿಸಲು ಸಜ್ಜಾಗುತ್ತಿದ್ದಾರೆ.

Show More

Leave a Reply

Your email address will not be published. Required fields are marked *

Related Articles

Back to top button