Sports
ಅಂತೂ ಗೆಲುವು ಕಂಡ ಡೆಲ್ಲಿ ಕ್ಯಾಪಿಟಲ್ಸ್.
ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಇರುವ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್ ಜಾಯಿಂಟ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಡೆಲ್ಲಿ 6 ವಿಕೆಟುಗಳ ಗೆಲುವು ಸಾಧಿಸಿದೆ. ಅಂತೂ ಹಲವು ದಿನಗಳ ನಂತರ ಡೆಲ್ಲಿ ಕ್ಯಾಪಿಟಲ್ಸ್ ಅಬ್ಬರಿಸಿದ್ದಾರೆ.
ಟಾಸ್ ಗೆದ್ದ ಲಕ್ನೋ ತಂಡ ಮೊದಲು ಬ್ಯಾಟಿಂಗ್ ಮಾಡಲು ನಿಶ್ಚಯಿಸಿತು. ಅದರಂತೆ ಮೊದಲ ಇನ್ನಿಂಗ್ಸ್‌ನಲ್ಲಿ 7 ವಿಕೆಟುಗಳ ನಷ್ಟಕ್ಕೆ 167 ರನ್ನ್ ಕಲೆ ಹಾಕಿತು. ಈ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್, 11 ಬೌಲ್‌ಗಳು ಬಾಕಿ ಇರುವ ಮುನ್ನವೇ 170 ರನ್ನುಗಳನ್ನು ಸಿಡಿಸಿ ಗೆಲುವಿನ ಕೇಕೆ ಹಾಕಿತು.
ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕುಲದೀಪ್ ಯಾದವ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು. ಇವರು 4 ಓವರ್‌ಗಳಲ್ಲಿ 20 ರನ್ನ್ ನೀಡಿ, 3 ವಿಕೆಟ್‌ಗಳನ್ನು ಕಬಳಿಸಿದರು. ಡೆಲ್ಲಿ ಈ ಗೆಲುವಿನೊಂದಿಗೆ ಆರ್‌ಸಿಬಿ ತಂಡವನ್ನು ಅಂಕಪಟ್ಟಿಯ ಕೊನೆಗೆ ಅಟ್ಟಿದೆ.