ನವದೆಹಲಿ: ಲೋಕಸಭಾ ಚುನಾವಣೆ 2024ಕ್ಕೆ ಇನ್ನೇನು ಕ್ಷಣಗಣನೆ ಆರಂಭವಾಗಿದೆ. ಇನ್ನು ಉಳಿದಿರುವುದು ಕೇವಲ 7 ದಿನಗಳು ಮಾತ್ರ. ದೇಶದ ಎಲ್ಲಾ ಪಕ್ಷಗಳು ಭರಾಟೆಯ ಪ್ರಚಾರ ಕೈಗೊಂಡಿದ್ದಾರೆ. ಆರೋಪ ಹಾಗೂ ಪ್ರತ್ಯಾರೋಪಗಳ ಸರಮಾಲೆ ಪ್ರತಿದಿನವೂ ಕೇಳಿಬರುತ್ತಿದೆ. ಒಂದೆಡೆಯಲ್ಲಿ ಅಭಿವೃದ್ಧಿ ರಾಜಕಾರಣ, ಒಂದೆಡೆಯಲ್ಲಿ ಕುಟುಂಬ ರಾಜಕಾರಣ. ಇದು ಚುನಾವಣೆಯ ಕಾಲ ಎಂದು ಇವೆಲ್ಲವೂ ಸಾರುತ್ತಿವೆ.
ಚುನಾವಣಾ ಆಯೋಗ ಈ ಬಾರಿಯ ಚುನಾವಣೆಯನ್ನು ಏಳು ಹಂತಗಳಲ್ಲಿ ನಡೆಸಲು ಮುಂದಾಗಿದೆ. ಏಪ್ರಿಲ್ 19ರಿಂದ ಜೂನ್ 01ರವರೆಗೆ, ದೇಶದ ಹಲವು ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ. ಜೂನ್ 04ರಂದು ಚುನಾವಣೆಯ ಫಲಿತಾಂಶ ಹೊರಬರಲಿದೆ.
ಮೊದಲ ಹಂತದ ಚುನಾವಣೆ ಇದೇ ಏಪ್ರಿಲ್ 19ರಂದು ನಡೆಯಲಿದ್ದು, ಈಗ ಕೇವಲ 7 ದಿನಗಳು ಅಷ್ಟೇ ಬಾಕಿ ಇದೆ. ಮೊದಲ ಹಂತದಲ್ಲಿ ಚುನಾವಣೆ ನಡೆಯುವ ರಾಜ್ಯಗಳು: ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸಘರ್, ಮಧ್ಯಪ್ರದೇಶ, ಮಹಾರಾಷ್ಟ್ರ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ರಾಜಸ್ಥಾನ, ಸಿಕ್ಕಿಂ, ತಮಿಳುನಾಡು, ತ್ರಿಪುರ, ಉತ್ತರ ಪ್ರದೇಶ, ಉತ್ತರಾಖಂಡ, ಪಶ್ಚಿಮ ಬಂಗಾಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಜಮ್ಮು ಮತ್ತು ಕಾಶ್ಮೀರ, ಲಕ್ಷದ್ವೀಪ, ಪಾಂಡಿಚೇರಿ.