ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾಗಿ ಆಯೇಷಾ ಖಾನಂ ಆಯ್ಕೆ.

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧೀನದಲ್ಲಿರುವ, ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷ ಸ್ಥಾನಕ್ಕೆ ಶ್ರೀಮತಿ. ಆಯೇಷಾ ಖಾನಂ ಅವರು ಹೆಸರನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸೂಚಿಸಿದರು. ಈ ಮೂಲಕ ಅಕಾಡೆಮಿಯಲ್ಲಿ ಮೊಟ್ಟಮೊದಲ ಬಾರಿಗೆ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮತ್ತು ಕಲ್ಯಾಣ ಕರ್ನಾಟಕ ಭಾಗಕ್ಕೆ ಸೇರಿದ ಮಹಿಳೆ ಅಧ್ಯಕ್ಷ ಸ್ಥಾನವನ್ನು ವಹಿಸಿದಂತಾಗಿದೆ.

“ಇವತ್ತಿನವರೆಗೂ ಮಾಧ್ಯಮ ಅಕಾಡೆಮಿಗೆ ಅಲ್ಪಸಂಖ್ಯಾತ ಸಮುದಾಯದವರನ್ನು ಮತ್ತು ಮಹಿಳೆಯನ್ನು ಯಾವ ಮುಖ್ಯಮಂತ್ರಿಗಳೂ ನೇಮಿಸಿಲ್ಲ. ಈ ಕೊರತೆಯನ್ನು ನೀವು ಅಳಿಸಿದಂತಾಗುತ್ತದೆ. ಜೊತೆಗೆ ಆಯೇಷಾ ಅವರು ಕಲ್ಯಾಣ ಕರ್ನಾಟಕದ ಕಲ್ಬುರ್ಗಿ ಜಿಲ್ಲೆಯವರಾಗಿರುವುದರಿಂದ ಸಾಮಾಜಿಕ ನ್ಯಾಯ, ಪ್ರಾದೇಶಿಕ ನ್ಯಾಯ, ಲಿಂಗ ಸಮಾನತೆಗೂ ಮಾನ್ಯತೆ ಕೊಟ್ಟಂತಾಗುತ್ತದೆ.” ಎಂಬುದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರ ಅಭಿಪ್ರಾಯವಾಗಿತ್ತು.
ಇವರ ಜೊತೆಗೆ ಅಕಾಡೆಮಿಯ ಸದಸ್ಯರನ್ನಾಗಿ ಎಂ.ಎನ್.ಅಹೋಬಳಪತಿ, ಕೆ.ವೆಂಕಟೇಶ್, ಕೆ. ನಿಂಗಜ್ಜ ರನ್ನು ಆಯ್ಕೆ ಮಾಡಲಾಗಿದೆ.