ಬಿಜೆಪಿಯ ಮಹಾನ್ ನಾಯಕನಿಗೆ ‘ಭಾರತರತ್ನ’


ಭಾರತೀಯ ಜನತಾ ಪಕ್ಷದ ಭೀಷ್ಮ, ದೇಶ ಕಂಡ ಧೀಮಂತ ನಾಯಕ, ಮಾಜಿ ಉಪ ಪ್ರಧಾನಮಂತ್ರಿ ಶ್ರೀ ಎಲ್.ಕೆ. ಅಡ್ವಾಣಿ ಅವರಿಗೆ 2024ನೇ ಸಾಲಿನ ಭಾರತ ರತ್ನ ಪ್ರಶಸ್ತಿ ನೀಡಲಾಗುವುದು ಎಂಬ ಬಗ್ಗೆ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೇಳಿದ್ದಾರೆ.
‘ ಶ್ರೀ ಎಲ್ ಕೆ ಅಡ್ವಾಣಿ ಜಿ ಅವರಿಗೆ ಭಾರತ ರತ್ನ ನೀಡಲಾಗುವ ವಿಷಯವನ್ನು ತಮ್ಮೊಂದಿಗೆ ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ. ನಾನು ಕೂಡ ಅವರೊಂದಿಗೆ ಮಾತನಾಡಿ ಈ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಅಭಿನಂದಿಸಿದ್ದೇನೆ. ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಒಬ್ಬರು, ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಅಪಾರವಾದದ್ದು.’ ಎಂದು ಪ್ರಧಾನಿ ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ರಾಮಜನ್ಮಭೂಮಿ ಹೋರಾಟದಲ್ಲಿ ಅವರ ಪಾತ್ರ ಮರೆಯಲಾಗದಂತಹದ್ದು, ರಥಯಾತ್ರೆಯ ಮೂಲಕ ರಾಮಜನ್ಮಭೂಮಿ ಆಂದೋಲನಕ್ಕೆ ಜನರನ್ನು ಒಗ್ಗೂಡಿಸಿದವರು ಅಡ್ವಾಣಿಯವರು. ಬಿಜೆಪಿಯ ಸಂಸ್ಥಾಪಕರಲ್ಲಿ ಒಬ್ಬರಾಗಿ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದಲ್ಲಿ ಉಪ ಪ್ರಧಾನಮಂತ್ರಿಗಳಾಗಿ ದೇಶಕ್ಕೆ ಸೇವೆ ಸಲ್ಲಿಸಿದ್ದಾರೆ.