Politics

ಯಾವುದೇ ಕ್ಷಣದಲ್ಲಿ ಬಿಎಸ್‌ವೈ ಅರೆಸ್ಟ್.

ಬೆಂಗಳೂರು: ಪೋಕ್ಸೋ ಪ್ರಕರಣದ ಅಡಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧನ ಮಾಡುವಂತೆ ನ್ಯಾಯಾಲಯ ಆದೇಶ ನೀಡಿದೆ. ‘ಬಾಲಕಿಯನ್ನು ಕೊಠಡಿಗೆ ಕರೆದೊಯ್ದು ಆಕೆಯ ವಕ್ಷಸ್ಥಳ ಹಿಸುಕಿ ಲೈಂಗಿಕ ಕಿರುಕುಳ ನೀಡಿದ್ದಾರೆ’. ಎಂದು ಆರೋಪಿಸಲಾಗಿತ್ತು.

ಈ ಕುರಿತಂತೆ ನಗರದ 51ನೇ ಸಿವಿಲ್ ಮತ್ತು ಹೆಚ್ಚುವರಿ ಸೆಶನ್ ಹಾಗೂ ಪೋಕ್ಸೋ ಪ್ರಕರಣಗಳ ವಿಚಾರಣೆ ನಡೆಸುವ ತ್ವರಿತಗತಿಯ ವಿಶೇಷ ನ್ಯಾಯಾಲಯ-1 ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಲು ಆದೇಶವನ್ನು ನೀಡಿದೆ.

ಸಾಕ್ಷಿ ನಾಶ ಮಾಡುವ ಪ್ರಯತ್ನ ನಡೆಯುತ್ತಿದೆಯೆಂಬ ಆರೋಪವೂ ಬಿಎಸ್‌ವೈ ಮೇಲಿದೆ. ಯಾವುದೇ ಕ್ಷಣದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಬಂಧನ ಆಗುವ ಸಾಧ್ಯತೆ ಇದೆ.

Show More

Leave a Reply

Your email address will not be published. Required fields are marked *

Related Articles

Back to top button