Politics
ಆಂಧ್ರದಲ್ಲಿ ಚಂದ್ರಬಾಬು ನಾಯ್ಡು ಸರ್ಕಾರ
ಅಮರಾವತಿ: ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಹೊರಬಂದಿದೆ. ಮತ್ತೊಮ್ಮೆ ತೆಲುಗು ದೇಶಂ ಪಕ್ಷ ಅಧಿಕಾರದ ಚುಕ್ಕಾಣಿಯನ್ನು ಹಿಡಿದಿದೆ. ಈ ಮೂಲಕ ಜಗನ್ ಮೋಹನ್ ರೆಡ್ಡಿ ಅವರ ಸರ್ಕಾರದ ಆಡಳಿತ ಕಳೆದುಕೊಂಡಿದೆ.
ಚಂದ್ರಬಾಬು ನಾಯ್ಡು ಅವರು 4ನೇ ಬಾರಿ ಆಂಧ್ರಪ್ರದೇಶದ ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಜೂನ್ 09 ರಂದು ರಾಜ್ಯಧಾನಿ ಅಮರಾವತಿಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಒಟ್ಟು 175 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಆಂಧ್ರ ಪ್ರದೇಶದಲ್ಲಿ, ಈ ಬಾರಿ ಚಂದ್ರಬಾಬು ನಾಯ್ಡು ಅವರ ನೇತೃತ್ವದ ತೆಲುಗು ದೇಶಂ ಪಕ್ಷ 135 ಸ್ಥಾನಗಳನ್ನು ಗೆದ್ದು ಜಯಭೇರಿ ಬಾರಿಸಿದೆ.