ಅನರ್ಹ ಬಿಪಿಎಲ್ ಕಾರ್ಡ್ಗಳಿಗೆ ಬ್ರೇಕ್ ಹಾಕಿದ ಸಿಎಂ.
ಬೆಂಗಳೂರು: ರಾಜ್ಯದಲ್ಲಿ ಅನರ್ಹಗೊಂಡ ಬಿಪಿಎಲ್ ಕಾರ್ಡ್ ಗಳನ್ನು ಬಳಸಿ, ಸರ್ಕಾರದ ಸಬಲತ್ತುಗಳನ್ನು ಬಳಸಿಕೊಳ್ಳುವ ಪ್ರಕರಣಗಳು ಈಗಾಗಲೇ ಅತಿರೇಕಕ್ಕೆ ಏರಿರುವುದನ್ನು ಗಮನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಇದರ ವಿರುದ್ಧವಾಗಿ ಕಠಿಣ ನಿರ್ಧಾರವನ್ನು ಕೈಗೊಂಡಿದ್ದಾರೆ. ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ.
“ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ಕೈ ಬಿಟ್ಟು ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡ್ಗಳನ್ನು ಒದಗಿಸಲು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಜನರನ್ನು ಅನಗತ್ಯವಾಗಿ ಅಲೆದಾಡಿಸಬಾರದು. ಅವರ ಸಮಸ್ಯೆ, ದೂರುಗಳನ್ನು ಆಲಿಸಿ ಅಗತ್ಯ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ.” ಎಂದು ಮಾಧ್ಯಮಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ.
ಒಂದು ಯೋಜನೆಯ ಅಗತ್ಯ ಯಾರಿಗೂ ನಿಜವಾಗಿಯೂ ಇರುತ್ತದೆಯೋ, ಅವರಿಗೆ ಅದರ ಫಲ ಸಿಗಬೇಕು. ಸರ್ಕಾರದ ಖಜಾನೆಯಿಂದ ಹೊರಹೋಗುವ ಪ್ರತಿಯೊಂದು ರೂಪಾಯಿ ಅರ್ಹ ಫಲಾನುಭವಿಗಳಿಗೆ ಮಾತ್ರ ಸಿಗಬೇಕು.