Bengaluru
ರೇಣುಕಾ ಸ್ವಾಮಿ ಅವರ ಕುಟುಂಬದವರನ್ನು ಭೇಟಿ ಮಾಡಿದ ಸಿಎಂ.
ಬೆಂಗಳೂರು: ದರ್ಶನ ಕೊಲೆ ಮಾಡಿದ್ದಾರೆ ಎಂದು ಹೇಳಲಾದ ರೇಣುಕಾ ಸ್ವಾಮಿ ಅವರ ಕುಟುಂಬದವರನ್ನು ಇಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು, ಕಾವೇರಿಯಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ರೇಣುಕಾ ಸ್ವಾಮಿ ಅವರ ತಂದೆ ಹಾಗೂ ತಾಯಿ ಪುತ್ರ ಶೋಕವನ್ನು ಮುಖ್ಯಮಂತ್ರಿಗಳಲ್ಲಿ ತೋಡಿಕೊಂಡರು.
ಕೊಲೆಯ ಪ್ರಕರಣವನ್ನು ತನಿಖೆ ಮಾಡುತ್ತಿರುವ ಪೋಲಿಸ್ ಇಲಾಖೆಯ ಕಾರ್ಯವೈಖರಿ ಬಗ್ಗೆ ಸಮಾಧಾನ ವ್ಯಕ್ತಪಡಿಸಿದರು. ಸಿದ್ದರಾಮಯ್ಯನವರು ಮೃತನ ಕುಟುಂಬಕ್ಕೆ ಸಾಂತ್ವನ ಹೇಳಿದರು. ಇದರೊಂದಿಗೆ, ತಮ್ಮ ಮಗಳಿಗೆ ಒಂದು ಸರ್ಕಾರಿ ನೌಕರಿ ಕೊಡಿಸುವಂತೆ ಸಿಎಂ ಬಳಿ ರೇಣುಕಾ ಸ್ವಾಮಿ ಕುಟುಂಬದವರು ಮನವಿ ಮಾಡಿದ್ದಾರೆ. ಇದಕ್ಕೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿದುಬಂದಿದೆ.