Sports

ಸಿಎಸ್‌ಕೆ ದಾಳಿಗೆ ಗುಜರಾತ್ ಧೂಳೀಪಟ.

ಚೆನ್ನೈ: ನಿನ್ನೆ ಮಾರ್ಚ್ 26ರಂದು ಚೆನ್ನೈನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದಂತಹ ಇಂಡಿಯನ್ ಪ್ರೀಮಿಯರ್ ಲೀಗ್ ನ ಏಳನೇ ಪದ್ಯದಲ್ಲಿ ಗುಜರಾತ್ ಟೈಟಾನ್ಸ್‌ನ್ನು, ಚೆನ್ನೈ ಸೂಪರ್ ಕಿಂಗ್ಸ್ ತನ್ನ ಮನೆಯಂಗಳದಲ್ಲಿ ಬಗ್ಗು ಬಡಿದಿದೆ.

ಗುಜರಾತ್ ಟೈಟಾನ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಬ್ಯಾಟಿಂಗ್ ಮಾಡಲು ಬಂದ ಸಿಎಸ್‌ಕೆ ತಂಡ ಮೊದಲ ಇನ್ನಿಂಗ್ಸ್ ನಲ್ಲಿ 20 ಓವರ್ ಗಳಿಗೆ 6 ವಿಕೆಟ್‌ಗಳ ನಷ್ಟಕ್ಕೆ 206 ರನ್ ಗಳ ಬೃಹತ್ ಮೊತ್ತವನ್ನು ಕಲೆ ಹಾಕಿತು.

ಈ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಗುಜರಾತ್ ಟೈಟಾನ್ ತಂಡ, 20 ಓವರ್ ಗಳಲ್ಲಿ ತನ್ನ 8 ವಿಕೆಟ್‌ಗಳನ್ನು ಕಳೆದುಕೊಂಡು ಕೇವಲ 143 ರನ್ನುಗಳನ್ನು ಕಲೆಹಾಕಲಷ್ಟೇ ಸಾಧ್ಯವಾಯಿತು.

ಈ ಮೂಲಕ ತನ್ನ ಎರಡನೇ ಗೆಲುವನ್ನು ಸಾಧಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪಾಯಿಂಟ್ಸ್ ಪಟ್ಟಿಯಲ್ಲಿ ನಾಲ್ಕು ಅಂಕಗಳೊಂದಿಗೆ ಮೊದಲ ಸ್ಥಾನವನ್ನು ಗಳಿಸಿದೆ. ಈ ಪಂದ್ಯದಲ್ಲಿ 23 ಬಾಲುಗಳಲ್ಲಿ 53 ರನ್ನುಗಳನ್ನು ಗಳಿಸಿದ ಶಿವಂ ಧೂಬೆ ‘ಮ್ಯಾನ್ ಆಫ್ ದಿ ಮ್ಯಾಚ್’ ಗೌರವಕ್ಕೆ ಪಾತ್ರರಾದರು.

Show More

Related Articles

Leave a Reply

Your email address will not be published. Required fields are marked *

Back to top button