Politics
ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ಗೆ ರಾಜಾತಿಥ್ಯ: ತಪ್ಪಿತಸ್ಥ ಅಧಿಕಾರಿಗಳಿಗೆ ಅಮಾನತು ಮಾಡಿದ ಸಿಎಂ..?!
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತು ಇತರ ರೌಡಿಶೀಟರ್‌ಗಳಿಗೆ ರಾಜಾತಿಥ್ಯ ಒದಗಿಸುತ್ತಿರುವ ಬಗ್ಗೆ ವರದಿಗಳು ಹೊರಬಿದ್ದಿದ್ದು, ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, “ಈ ಘಟನೆಯಲ್ಲಿರುವ ತಪ್ಪಿತಸ್ಥ ಜೈಲು ಅಧಿಕಾರಿಗಳನ್ನು ತಕ್ಷಣವೇ ಅಮಾನತು ಮಾಡುವಂತೆ ಆದೇಶ ನೀಡಿದ್ದೇನೆ. ದರ್ಶನ್ ಮತ್ತು ಇತರರನ್ನು ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರಿಸಲು ಸೂಚಿಸಲಾಗಿದೆ,” ಎಂದರು.
ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಜೈಲಿಗೆ ತಕ್ಷಣ ಭೇಟಿ ನೀಡಿ, ಈ ಪ್ರಕರಣದ ಸಂಪೂರ್ಣ ವರದಿಯನ್ನು ಸಲ್ಲಿಸಲು ಸೂಚನೆ ನೀಡಲಾಗಿದೆ.
ಈ ಘಟನೆ ರಾಜ್ಯದಲ್ಲಿ ವಿವಿಐಪಿ ಸಂಸ್ಕೃತಿಯ ವಿರುದ್ಧ ತೀವ್ರ ಆಕ್ರೋಶವನ್ನು ಉಂಟುಮಾಡಿದ್ದು, ಜನಸಾಮಾನ್ಯರ ನಡುವೆ ಚರ್ಚೆಗೆ ಗ್ರಾಸವಾಗಿದೆ. ಜೈಲಿನಲ್ಲಿ ರಾಜಾತಿಥ್ಯ ನೀಡುವ ಪ್ರಕ್ರಿಯೆಯನ್ನು ತೀವ್ರವಾಗಿ ನಿಂದಿಸಿರುವ ಸಿದ್ದರಾಮಯ್ಯ, ಜೈಲು ವ್ಯವಸ್ಥೆಯಲ್ಲಿ ದೋಷಗಳನ್ನು ಸರಿಪಡಿಸಲು ನಿರ್ಧರಿಸಿದ್ದಾರೆ.