ಸೆಲೆಬ್ರಿಟಿಗಳಿಗೆ ‘ದರ್ಶನ್’ ಮಹತ್ವದ ಸಂದೇಶ: ಈ ವರ್ಷ ಹುಟ್ಟುಹಬ್ಬಕ್ಕೆ…?!

ಬೆಂಗಳೂರು: ಸ್ಯಾಂಡಲ್‌ವುಡ್ ನಟ ದರ್ಶನ್ ಜೈಲಿನಿಂದ ಬಿಡುಗಡೆಯಾದ ನಂತರ ಮೊದಲ ಬಾರಿಗೆ ತಮ್ಮ ಅಭಿಮಾನಿಗಳಿಗಾಗಿ ವಿಡಿಯೋ ಮಾಡಿದ್ದು, ಅದನ್ನು ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿ ಸಂಚಲನ ಸೃಷ್ಟಿಸಿದ್ದಾರೆ. ಈ ವಿಡಿಯೋಗೆ ಸಿಕ್ಕಾಪಟ್ಟೆ ಲೈಕ್ಸ್, ಕಾಮೆಂಟ್ಸ್ ಬರುತ್ತಿದ್ದು, “ಇದು ಬಾಸ್ ಪವರ್” ಎಂದು ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳು ಕಮೆಂಟ್ ಮಾಡುತ್ತಿದ್ದಾರೆ.
ಏನು ಹೇಳಿದ್ದಾರೆ ದರ್ಶನ್?
ಅಭಿಮಾನಿಗಳಿಗಾಗಿ ದರ್ಶನ್ ತಮ್ಮ ಮೊದಲ ಸೆಲ್ಫಿ ವಿಡಿಯೋದಲ್ಲಿ ಆರೋಗ್ಯ ಸಂಬಂಧಿತ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಆಚರಿಸಲು ಸಾಧ್ಯವಿಲ್ಲ ಎಂದು ತಿಳಿಸಿರುವ ಅವರು, ಆರೋಗ್ಯ ಸಮಸ್ಯೆಯ ಕಾರಣದಿಂದ ಹೆಚ್ಚು ಹೊತ್ತು ನಿಲ್ಲಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ವೈರಲ್ ವಿಡಿಯೋ – ಅಭಿಮಾನಿಗಳ ಭಾವನಾತ್ಮಕ ಪ್ರತಿಕ್ರಿಯೆ
ಎಷ್ಟೋ ದಿನಗಳ ನಂತರ ದರ್ಶನ್ ಮನಸ್ಸು ಬಿಚ್ಚಿ ಮಾತನಾಡಿದ್ದು, ಅಭಿಮಾನಿಗಳಲ್ಲಿ ಭಾರೀ ಕುತೂಹಲ ಹುಟ್ಟಿಸಿದೆ. ಅವರ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ಈ ವಿಡಿಯೋಗೆ ಭಾರೀ ಪ್ರಮಾಣದಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ.
ಈ ನಿಟ್ಟಿನಲ್ಲಿ, ದರ್ಶನ್ ಅವರ ಮುಂದಿನ ಹೆಜ್ಜೆಗಳ ಬಗ್ಗೆ ಅಭಿಮಾನಿಗಳು ಹೆಚ್ಚಿನ ಕುತೂಹಲ ವ್ಯಕ್ತಪಡಿಸುತ್ತಿದ್ದಾರೆ. ಅವರ ಹೊಸ ಸಿನಿಮಾಗಳ ಬಗ್ಗೆ, ಮುಂದಿನ ಪ್ಲ್ಯಾನ್ಸ್ ಬಗ್ಗೆ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಾಗಿದೆ.