Bengaluru

ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಕಟಿಬದ್ಧ ಎಂದ ಡಾ.ಜಿ.ಪರಮೇಶ್ವರ್.

ಬೆಂಗಳೂರು: ಹೈಟೆಕ್ ಸಿಟಿ ಬೆಂಗಳೂರಿನಲ್ಲಿ ಡ್ರಗ್ ಮಾರಾಟ ಹಾಗೂ ಉಪಯೋಗವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಈ ಡ್ರಗ್ ಅಮಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಯುವಕ ಯುವತಿಯರು ಬಲಿಯಾಗುತ್ತಿದ್ದಾರೆ. ಹೊರ ರಾಜ್ಯಗಳಿಂದ ಬರುವ ಈ ಡ್ರಗ್ಸ್‌ಗಳನ್ನು ನಿಯಂತ್ರಿಸಲು ಎಲ್ಲಾ ರೀತಿಯ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ.

ಇದರ ಕುರಿತು ಇಂದು ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್, “ಡ್ರಗ್ಸ್‌ ಮುಕ್ತ ಕರ್ನಾಟಕಕ್ಕೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ. ಈ ವರ್ಷದ 6 ತಿಂಗಳಲ್ಲಿ 1,791 ಡ್ರಗ್ಸ್‌ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 884 ಪ್ರಕರಣಗಳು ನ್ಯಾಯಾಲಯದ ವಿಚಾರಣೆಯಲ್ಲಿದ್ದು, 1,179 ವ್ಯಸನಿಗಳನ್ನು ಬಂಧಿಸಲಾಗಿದೆ. 189 ವ್ಯಸನಿಗಳಿಗೆ ಶಿಕ್ಷೆಯಾಗಿದೆ.” ಎಂದು ತಿಳಿಸಿದ್ದಾರೆ.

Show More

Leave a Reply

Your email address will not be published. Required fields are marked *

Related Articles

Back to top button