Politics
ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲು: ಕುರ್ಚಿ ಕಳೆದುಕೊಳ್ಳುವರೇ ಮುಖ್ಯಮಂತ್ರಿ..?!
ಮೈಸೂರು: ರಾಜ್ಯದ ರಾಜಕೀಯ ಹಗ್ಗ ಜಗ್ಗಾಟದಲ್ಲಿ ಹೊಸ ತಿರುವು ನೀಡುವಂತಹ ಘಟನೆ ಮೈಸೂರಿನಲ್ಲಿ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಶುಕ್ರವಾರ ಪ್ರಾಥಮಿಕ ವರದಿ (ಎಫ್‌ಐಆರ್) ದಾಖಲಿಸಿದ್ದಾರೆ. ಜನಪ್ರತಿನಿಧಿಗಳ ನ್ಯಾಯಾಲಯದ ನಿರ್ದೇಶನದಂತೆ ಈ ಕ್ರಮ ಕೈಗೊಳ್ಳಲಾಗಿದೆ.
ಏನಿದು ಪ್ರಕರಣ?
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರ ವಿರುದ್ಧ ಈ ಎಫ್‌ಐಆರ್ ದಾಖಲಾಗಿದೆ. ಸಿದ್ದರಾಮಯ್ಯ ಅವರು, ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಮತ್ತು ಜಮೀನಿನ ಮಾಲೀಕರಾದ ದೇವರಾಜು ಅವರ ವಿರುದ್ಧ ಕೇಸು ದಾಖಲಾಗಿದೆ. ಸಿದ್ದರಾಮಯ್ಯ ಅವರು ಈ ಪ್ರಕರಣದಲ್ಲಿ ಮೊದಲ ಆರೋಪಿಯಾಗಿದ್ದಾರೆ.
ಮುಂದೇನು?
ಈ ಪ್ರಕರಣದ ಮುಂದಿನ ಹಂತವನ್ನು ಕಾದು ನೋಡಬೇಕಿದೆ. ಲೋಕಾಯುಕ್ತ ಪೊಲೀಸರು ಈಗ ತನಿಖೆ ಆರಂಭಿಸಲಿದ್ದು, ಈ ಕೇಸಿನಲ್ಲಿ ಸತ್ಯಾಸತ್ಯತೆ ಬಯಲಾಗುವವರೆಗೂ ರಾಜ್ಯ ರಾಜಕೀಯ ಕುತೂಹಲದಿಂದ ಕೂಡಿರುತ್ತದೆ.