Bengaluru
ಕಟ್ಟಡದಿಂದ ಬಿದ್ದು ಮಾಜಿ ಕ್ರಿಕೆಟಿಗನ ಸಾವು.
ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರರಾಗಿದ್ದ, ಕರ್ನಾಟಕ ಮೂಲದವರಾದ ಡೇವಿಡ್ ಜಾನ್ಸನ್ ಅವರು ಇಂದು ಕಟ್ಟಡದ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾರೆ. ಮೃತರಿಗೆ 52 ವರ್ಷ ವಯಸ್ಸಾಗಿತ್ತು.
ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಎಸ್ ಎಲ್ ವಿ ಪ್ಯಾರಡೈಸ್ ಅಪಾರ್ಟ್ಮೆಂಟ್‌ನ ನಾಲ್ಕನೇ ಮಹಡಿಯಿಂದ ಜಾನ್ಸನ್ ಅವರು ಬಿದ್ದಿದ್ದಾರೆ. ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಸ್ಥಳೀಯ ಆಸ್ಪತ್ರೆಗೆ ಸ್ಥಳಾಂತರಿದ್ದಾರೆ. ಡೇವಿಡ್ ಜಾನ್ಸನ್ ಅವರು 1996ರಲ್ಲಿ ತಮ್ಮ ಮೊದಲ ಟೆಸ್ಟ್ ಅನ್ನು ಆಸ್ಟ್ರೇಲಿಯಾದರು ವಿರುದ್ಧ ಆಡಿದ್ದರು. ಇವರು ಬಲಗೈ ವೇಗದ ಬೌಲರ್ ಆಗಿದ್ದರು.