Bengaluru
ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ಆಗಸ್ಟ್ 01 ರಿಂದ ರಾಜ್ಯದಲ್ಲಿ 7ನೇ ವೇತನ ಆಯೋಗ.

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಬಹುದಿನದ ಬೇಡಿಕೆಯನ್ನು ಇಂದು ರಾಜ್ಯ ಸರ್ಕಾರ ನೆರವೇರಿಸಿದೆ. ಆಗಸ್ಟ್ 1ರಿಂದ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
“ನಮ್ಮ ಸರ್ಕಾರವು 7ನೇ ವೇತನ ಆಯೋಗದ ವರದಿಯ ಶಿಫಾರಸ್ಸುಗಳನ್ನು ಆಗಸ್ಟ್ 01 ರಿಂದ ಜಾರಿಗೆ ತರಲು ನಿರ್ಧರಿಸಿದೆ. ಇದರಿಂದ ಸರ್ಕಾರಿ ನೌಕರರ ಮೂಲವೇತನ ಮತ್ತು ಪಿಂಚಣಿಯಲ್ಲಿ ಶೇ.58.50 ಹೆಚ್ಚಳವಾಗಲಿದ್ದು, ಇದಕ್ಕಾಗಿ ವಾರ್ಷಿಕ ರೂ.20,208 ಕೋಟಿ ಹೆಚ್ಚುವರಿ ವೆಚ್ಚವನ್ನು ಸರ್ಕಾರ ಭರಿಸಲಿದೆ.” ಎಂದು ಟ್ವೀಟ್ ಮಾಡಿದ್ದಾರೆ.