ಗ್ಯಾರಂಟಿ ಯೋಜನೆಗಳ ಫಲಶ್ರುತಿಗಳ ಬಗ್ಗೆ ರಾಜ್ಯಪಾಲರಿಂದ ಗುಣಗಾನ..!

ನಿನ್ನೆ ಇಂದ ವಿಧಾನ ಮಂಡಲದ ಜಂಟಿ ಅಧಿವೇಶನದ ಆರಂಭವಾಗಿದ್ದು, ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಒಟ್ಟು 39 ಪುಟಗಳ ಲಿಖಿತ ಭಾಷಣದ ಉದ್ದಕ್ಕೂ ರಾಜ್ಯ ಸರ್ಕಾರದ ಸಾಧನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವಂತಹ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಮುಂಚಿಗಿಂತ ಅಭಿವೃದ್ಧಿಯಾಗಿದ್ದು ರಾಜ್ಯ ಹಣಕಾಸು ವ್ಯವಸ್ಥೆ ಹದಗೆಟ್ಟಿದೆ ಎಂದು ವಿರೋಧ ಪಕ್ಷಗಳು ಭವಿಷ್ಯವನ್ನು ನುಡಿದಿದ್ದರು. ಆ ಭವಿಷ್ಯವನ್ನು ಸರ್ಕಾರ ಸುಳ್ಳು ಮಾಡಿದೆ. ರಾಜ್ಯದ ಅಭಿವೃದ್ಧಿಯ ವೇಗ ಚುರುಕುಗೊಳಿಸುವಲ್ಲಿ, ಹಣಕಾಸು ವ್ಯವಸ್ಥೆ ಸದೃಢಗೊಳಿಸುವಲ್ಲಿ ಸರ್ಕಾರಿ ಯಶಸ್ವಿಯಾಗಿದ್ದು ಗಂಭೀರವಾದ ಕಾನೂನು ಮತ್ತು ಸುವ್ಯವಸ್ಥೆ ಉದ್ಭವಿಸಿ, ಜನಸ್ನೇಹಿಯಾಗಿ ಕೆಲಸ ಮಾಡುತ್ತಿದೆ ಎಂದು ರಾಜ್ಯಪಾಲರು ಸರಕಾರವನ್ನ ಶ್ಲಾಘಿಸಿದರು.

ಮೂಲ ಸೌಕರ್ಯ ಒದಗಿಸುವುದರಲ್ಲೂ ಕರ್ನಾಟಕ ಇಡೀ ದೇಶದಲ್ಲಿ ಮುಂಚೂಣಿ ರಾಜ್ಯವಾಗಿದೆ. ಸಂಪತ್ತನ್ನು ಬಂಡವಾಳ ವೆಚ್ಚಗಳಿಗೆ ವಿನಿಯೋಗಿಸುತ್ತಿದೆ. ಇದು ಮಹಾರಾಷ್ಟ್ರ, ತಮಿಳುನಾಡು ಮತ್ತು ತೆಲಂಗಾಣ ಮುಂತಾದ ಪ್ರಗತಿಪರ ರಾಜ್ಯಗಳಿಗಿಂತ ಹೆಚ್ಚಿನ ಪ್ರಮಾಣವಾಗಿದೆ ಎಂದು ಹೇಳುವ ಮೂಲಕ ರಾಜ್ಯ ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿಲ್ಲ ಎಂಬುದನ್ನು ರಾಜ್ಯಪಾಲರು ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಹಾಗೆ ಪೊಲೀಸ್ ವ್ಯವಸ್ಥೆ ಸಹ ಉತ್ತಮವಾಗಿ ಕೆಲಸ ಮಾಡುತ್ತಿದೆ. ಸೈಬರ್ ಅಪರಾಧಿಗಳಿಗೆ ಕಡಿವಾಣ ಹಾಕಲು ಸರಕಾರ ಆದ್ಯತೆಯನ್ನು ನೀಡುತ್ತಾ ಇದೆ ಹಾಗೆ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ 70000 ಕೋಟಿ ಬಿಡುಗಡೆ ಮಾಡಲಾಗಿದೆ. ಕಲ್ಯಾಣ ಕರ್ನಾಟಕಕ್ಕೆ ಅಭಿವೃದ್ಧಿಗೆ ವರ್ಷಕ್ಕೆ 90 ಸಾವಿರ ಕೋಟಿಗೂ ಹೆಚ್ಚು ಹಣ ಖರ್ಚು ಮಾಡಲಾಗುತ್ತಿದೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಕಣ್ಣೀರನ್ನು ಒರೆಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ರಾಜ್ಯಪಾಲರು ತಮ್ಮ ಭಾಷಣದಲ್ಲಿ ಸರ್ಕಾರವನ್ನ ಶ್ಲಾಘಿಸಿದರು.
ಮೇಘಾ ಜಗದೀಶ್
ಆಲ್ಮಾ ಮೀಡಿಯಾ ಸ್ಕೂಲ್ ವಿದ್ಯಾರ್ಥಿನಿ