CinemaEntertainment
ಗುಡ್ ನ್ಯೂಸ್ ಕೊಟ್ಟ ಹರ್ಷಿಕಾ ಪೂಣಚ್ಚ.
ಬೆಂಗಳೂರು: ಕೊಡಗು ಬೆಡಗಿ, ಬಹುಭಾಷಾ ನಟಿ ಹರ್ಷಿಕಾ ಪೂಣಚ್ಚ ಇಂದು ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅವರ ಸಾಮಾಜಿಕ ಜಾಲತಾಣಗಳಲ್ಲಿ ಅಭಿನಂದನೆಯ ಮಹಾಪೂರವೇ ಹರಿದುಬರುತ್ತಿದೆ. ಹಾಗಾದರೆ ಏನಿದು ಸಿಹಿ ಸುದ್ದಿ?
“ಗೆಳೆಯರೆ ,ಇಂದಿನವರೆಗು ನಮ್ಮಿಬ್ಬರಿಗೆ ಸದಾ ಆಶೀರ್ವಾದಿಸುತ್ತಾ ಬಂದಿದ್ದೀರಿ, ಇನ್ನು ಮುಂದೆ ನಿಮ್ಮ ಪ್ರೀತಿ ,ಆಶೀರ್ವಾದ ನಮ್ಮ ಈ ಇನ್ನೊಂದು ಪುಟ್ಟ ಜೀವದ ಮೇಲು ಇರಲಿ. ಅಕ್ಟೋಬರ್ ಗೆ ಕಾತುರದಿಂದ ಕಾಯುತ್ತಿದ್ದೇವೆ 🩵
ಇಂತಿ ನಿಮ್ಮ ಭುವನ್ , ಹರ್ಷಿಕಾ.” ಎಂದು ಪೂಣಚ್ಚ ಹೇಳಿಕೊಂಡಿದ್ದಾರೆ.
ಹರ್ಷಿಕಾ ಪೂಣಚ್ಚ ಹಾಗೂ ಅವರ ಪತಿ ಭುವನ್ ಪೊನ್ನಣ್ಣ ಅವರು ಇದೇ ಅಕ್ಟೋಬರ್ ತಿಂಗಳಲ್ಲಿ ಪಾಲಕರಾಗಲಿದ್ದಾರೆ. ಕೊಡಗು ಸಾಂಸ್ಕೃತಿಕ ಉಡುಪನ್ನು ಧರಿಸಿದ ಪೋಟೋವನ್ನು ಹಂಚಿಕೊಂಡಿರುವ ಹರ್ಷಿಕಾ ಪೂಣಚ್ಚ ಎಲ್ಲರ ಗಮನವನ್ನು ಸೆಳೆದಿದ್ದಾರೆ.