CinemaEntertainment

ಹೆಣ್ಣು ಮಗುವಿಗೆ ಜನ್ಮ ನೀಡಿದ ‘ಹರ್ಷಿಕಾ ಪೂಣಚ್ಚ’: ನವರಾತ್ರಿಯ ಶುಭ ದಿನದಂದು ಶುಭ ಸುದ್ದಿ..!

ಬೆಂಗಳೂರು: ಸ್ಯಾಂಡಲ್‌ವುಡ್‌ನ ಜನಪ್ರಿಯ ನಟಿ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ದಂಪತಿಗೆ ಇಂದು ಬೆಳಗಿನ ಜಾವ 3 ಗಂಟೆಗೆ ಹೆಣ್ಣು ಮಗುವಿನ ಜನನವಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹರ್ಷಿಕಾ ಸುರಕ್ಷಿತವಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದು, ಕುಟುಂಬಸ್ಥರು ಸಂತಸದಿಂದ ಇದ್ದಾರೆ. ಹರ್ಷಿಕಾ ಹಾಗೂ ಭುವನ್ ದಂಪತಿಗೆ ಸಾಮಾಜಿಕ ಮಾಧ್ಯಮದಲ್ಲಿ ಶುಭಾಶಯಗಳು ಹರಿದು ಬರುತ್ತಿವೆ.

ಈ ಸುದ್ದಿ ಕೇಳಿ ಸ್ಯಾಂಡಲ್‌ವುಡ್‌ನಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಅಭಿಮಾನಿಗಳು ಹರ್ಷಿಕಾ ಹಾಗೂ ಭುವನ್ ದಂಪತಿಗೆ ಶುಭಾಶಯ ಕೋರುತ್ತಿದ್ದಾರೆ.

Show More

Leave a Reply

Your email address will not be published. Required fields are marked *

Related Articles

Back to top button