ಹರಿಯಾಣ ರಾಜ್ಯದ ಮುಖ್ಯಮಂತ್ರಿಯಾದ ಮನೋಹರ್ ಲಾಲ್ ಖಟ್ಟರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲಿಯೇ ನೂತನ ಮುಖ್ಯಮಂತ್ರಿಯಾಗಿ ಹರಿಯಾಣ ಬಿಜೆಪಿ ಅಧ್ಯಕ್ಷರಾದಂತಹ ನಯಾಬ್ ಸಿಂಗ್ ಸೈನಿ ಅವರನ್ನು ಆಯ್ಕೆ ಮಾಡಲಾಗಿದೆ.
ನಯಾಬ್ ಸಿಂಗ್ ಸೈನಿಯವರು ಓಬಿಸಿ ಸಮುದಾಯದ ಅಭ್ಯರ್ಥಿಯಾಗಿದ್ದು, ಹರಿಯಾಣದ ಕುರುಕ್ಷೇತ್ರ ಲೋಕಸಭಾ ಕ್ಷೇತ್ರದ ಸಂಸದರಾಗಿರುತ್ತಾರೆ. ಇವರು ಇಂದು ಸಂಜೆ 5:00 ಗಂಟೆಗೆ ಹರಿಯಾಣದ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹರಿಯಾಣ ಬಿಜೆಪಿ ಘಟಕ ತನ್ನ ಎಕ್ಸ್ ಖಾತೆಯಲ್ಲಿ ತಿಳಿಸಿದೆ.