
ಬೆಂಗಳೂರು: ಇಂದು ಬೆಂಗಳೂರಿನ ಹೆಚ್ಎಂಟಿ ಭವನದಲ್ಲಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಶ್ರೀ ಎಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ, ಕುದುರೆಮುಖ ಕಬ್ಬಿಣ ಅದಿರು ಕಂಪನಿ (KIOCL) ಮತ್ತು ಹೆಚ್ಎಂಟಿ ಸಂಸ್ಥೆಗಳ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.
“ಈ ಯೋಜನೆಗಳು ನಮ್ಮ ದೇಶದ ಕೈಗಾರಿಕಾ ಬೆಳವಣಿಗೆಯ ದೃಷ್ಟಿಯಿಂದ ಪ್ರಮುಖ ಹೆಜ್ಜೆಯಾಗಿದೆ,” ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ಹೆಚ್ಎಂಟಿ ಸಂಸ್ಥೆಯ ಪುನಶ್ಚೇತನಕ್ಕಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಸಹ ವಿವರಿಸಿದರು.
ಇದೇ ವೇಳೆ, ಕರ್ನಾಟಕದ ಕಾಂಗ್ರೆಸ್ ಸರ್ಕಾರ ತಮ್ಮ ವಿರುದ್ಧ ದ್ವೇಷ ರಾಜಕಾರಣ ಮಾಡುತ್ತಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, “ರಾಜಕೀಯ ದ್ವೇಷದ ಈ ನಡೆ ಜನಸಾಮಾನ್ಯರ ಹಿತಾಸಕ್ತಿ ವಿರುದ್ಧವಾಗಿದೆ,” ಎಂದು ಟೀಕಿಸಿದ್ದಾರೆ.