Bengaluru
ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಣಯಗಳು ಇವೇ ನೋಡಿ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ದಿನಾಂಕ 15.07.2024 ರಂದು ಸಚಿವ ಸಂಪುಟ ಸಭೆ ನೆರವೇರಿತು. ಈ ಸಭೆಯಲ್ಲಿ ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದ ಹಲವು ಕ್ಷೇತ್ರಗಳ ವಿವಿಧ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಇದಕ್ಕೆ ಸಂಬಂಧಿಸಿದ ಪ್ರಮುಖ ನಿರ್ಣಯಗಳು ಇಂತಿವೆ:
- ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕಲಿಯುತ್ತಿರುವ ಅಂದಾಜು 25 ಸಾವಿರ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಟ್, ಜೆಇಇ, ಸಿಇಟಿ ತರಬೇತಿ ಯೋಜನೆಯನ್ನು 712.50 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಅನುಮೋದನೆ.
- 10 ಜಿಲ್ಲಾ ಆಸ್ಪತ್ರೆಗಳಲ್ಲಿ ಡಿಜಿಟಲ್ ಮಮೊಗ್ರಫಿ, 4 ಆಸ್ಪತ್ರೆಗಳಲ್ಲಿ ಕೋಲ್ಲೋಸ್ಕೋಪಿ ಉಪಕರಣಗಳನ್ನು 710 ಕೋಟಿ ಅಂದಾಜು ಮೊತ್ತದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ.
- ಕರ್ನಾಟಕದ ನವ ನಿರ್ಮಾಣಕ್ಕೆ ಗ್ಯಾರಂಟಿ ಸರ್ಕಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಗುಡ್ಡದ ಚನ್ನೇನಹಳ್ಳಿ ಗ್ರಾಮಗಳ ಹಾಗೂ ಕೋಲಾರ ತಾಲೂಕು, ನರಸಪುರ ಹೋಬಳಿ, ಚಕ್ರಸಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‌ಗಳಲ್ಲಿ ಒಟ್ಟು 11 ಎಕರೆ 17 ಗುಂಟೆ ಜಮೀನಿನಲ್ಲಿ ಅನುಪಾತದ ಪಾಲುದಾರಿಕೆಯಡಿಯಲ್ಲಿ ಕರ್ನಾಟಕ ಗೃಹ ಮಂಡಳಿಯು ವಸತಿ ಯೋಜನೆಯನ್ನು 728216 ಕೋಟಿ ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲು ಒಪ್ಪಿಗೆ.
- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು, ಕುಂದಾಣ ಹೋಬಳಿಯ ತೈಲಗೆರೆ ಗ್ರಾಮದ ಸರ್ವೆ ನಂಬರ್‌ಗಳಲ್ಲಿ ಒಟ್ಟು 27 ಎಕರೆ 2 ಗುಂಟೆ ಜಮೀನುಗಳಲ್ಲಿ ಶೇ. 50:50 ಅನುಪಾತದ ಪಾಲುದಾರಿಕೆಯಡಿ ಕರ್ನಾಟಕ ಗೃಹ ಮಂಡಳಿಯು 756.80 ಕೋಟಿ ಅಂದಾಜು ಮೊತ್ತದಲ್ಲಿ ವಸತಿ ಯೋಜನೆ ಅನುಷ್ಠಾನಗೊಳಿಸಲು ಒಪ್ಪಿಗೆ.