ಬಿಎನ್‌ಎಸ್ ಬದಲು ಐಪಿಸಿ ಪಠ್ಯಕ್ರಮಕ್ಕೆ ಹೈಕೋರ್ಟ್ ಅನುಮತಿ…!

ಪ್ರಸ್ತುತ ದೇಶದಲ್ಲಿ ಐಪಿಸಿ ರದ್ದಾಗಿದ್ದು, ಬಿಎನ್‌ಎಸ್ ಜಾರಿಗೆ ಬಂದಿದೆ. ಆದ್ದರಿಂದ ಭಾರತೀಯ ದಂಡ ಸಂಹಿತೆ ಅಧ್ಯಯನ ಮಾಡಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ಕಾನೂನು ಪದವಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಬಿಎನ್‌ಎಸ್ ನಲ್ಲೆ ಪರೀಕ್ಷೆ ನಡೆಸಬೇಕು ಎಂದು ತಾಕೀತನ್ನು ಮಾಡಿತ್ತು. ಆದರೆ ಇಗ ವಿಶ್ವವಿದ್ಯಾಲಯ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿ ಉಚ್ಚ ನ್ಯಾಯಾಲಯ ಹೊಸ ತೀರ್ಪನ್ನು ಹೊರಡಿಸಿದೆ.

ಅನುತ್ತೀರ್ಣರಾದಂತಹ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯನ್ನು ನೀಡಿದ್ದು ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಐಪಿಸಿ ಪಠ್ಯಕ್ರಮದಡಿಯಲ್ಲಿ ಪರೀಕ್ಷೆ ನಡೆಸಲು ವಿಶ್ವವಿದ್ಯಾಲಯ ಸೂಚನೆ ನೀಡಿದೆ. ಐಪಿಸಿ ಅಧ್ಯಯನ ಮಾಡಿ ಅನುತ್ತೀರ್ಣರಾದ ಕಾನೂನು ವಿದ್ಯಾರ್ಥಿಗಳಿಗೂ ಬಿಎನ್‌ಎಸ್ ಪಠ್ಯಕ್ರಮದಲ್ಲಿ ಪರೀಕ್ಷೆ ನಡೆಸುವ ಸಂಬಂಧ ಕೆಎಸ್‌ಎಲ್‌ಯು ಡಿ 9 ರಂದು ಹೊರಡಿಸಿದ್ದ ಅಧಿಸೂಚನೆ ಪ್ರಶ್ನಿಸಿ ಕೆಲವು ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
ಹೈಕೋರ್ಟ ಕೆಎಸ್‌ಎಲ್‌ಯು ಹೊರಡಿಸಿದಂತಹ ಅಧಿಸೂಚನೆ ರದ್ದುಗೊಳಿಸಿ ಐಪಿಸಿ ಅಧ್ಯಯನ ನಡೆಸಿದ ವಿದ್ಯಾರ್ಥಿಗಳು ಬಿಎನ್‌ಎಸ್ ಪಠ್ಯಕ್ರಮದ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದು ಹೇಳಿದೆ. ಐಪಿಸಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ಬಿಎನ್‌ಎಸ್ ಪರೀಕ್ಷೆ ಬರೆಯುವಂತೆ ಒತ್ತಾಯಿಸಬಾರದು. ಎಂದು ನ್ಯಾಯ ಪೀಠ ಸಲಹೆ ನೀಡಿದೆ.
ಮೇಘಾ ಜಗದೀಶ್
ಆಲ್ಮಾ ಮೀಡಿಯಾ ಸ್ಕೂಲ್ ವಿದ್ಯಾರ್ಥಿನಿ