Bengaluru
ರಾಜ್ಯದ 1,199 ಗ್ರಾಮ ಪಂಚಾಯಿತಿಗಳಲ್ಲಿ ಕೊಳಚೆ ನೀರು ಮುಕ್ತಗೊಳಿಸಲು ಪ್ರಾಯೋಗಿಕ ಯೋಜನೆ ಜಾರಿ.

ಬೆಂಗಳೂರು: ಗ್ರಾಮಗಳ ಸ್ವಚ್ಛತೆಗೆ ಸವಾಲಾಗಿರುವ ‘ಗ್ರೇ ವಾಟರ್’ ಅನ್ನು ಸಮರ್ಪಕವಾಗಿ ನಿರ್ವಹಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಹೊಸ ಯೋಜನೆ ರೂಪಿಸಲಾಗಿದೆ. ಪ್ರಸ್ತುತ ಈ ಪ್ರಾಯೋಗಿಕ ಯೋಜನೆಯನ್ನು ರಾಜ್ಯದ 14 ಜಿಲ್ಲೆಗಳ 1,199 ಗ್ರಾಮ ಪಂಚಾಯಿತಿಗಳಲ್ಲಿ ಅನುಷ್ಠಾನಗೊಳಿಸಲಾಗುವುದು.
ಮನೆಗಳಲ್ಲಿ ಬಟ್ಟೆ, ಪಾತ್ರೆ ತೊಳೆಯಲು, ಸ್ನಾನಕ್ಕೆ ಬಳಸುವ ನೀರನ್ನು ಪೈಪ್ ಲೈನ್ ಮೂಲಕ ಸಂಗ್ರಹಿಸಿ ಅಲ್ಲಿ ಸೆಪ್ಟಿಕ್ ಟ್ಯಾಂಕ್ ಹಾಗೂ ವೆಬ್ ಟ್ಯಾಂಕ್ ನಿರ್ಮಿಸಿ ನೀರನ್ನು ಶುದ್ಧೀಕರಿಸಿ ಪಟ್ಟಣದ ಕೆರೆಗಳಿಗೆ ಹರಿಸುವುದು ಈ ಯೋಜನೆಯ ಮೂಲ ಉದ್ದೇಶವಾಗಿದೆ. ಇದರಿಂದ ಕೆರೆಗಳು ಕಲುಷಿತವಾಗುವುದನ್ನು ತಪ್ಪಿಸುವುದರ ಜೊತೆಗೆ ಗ್ರಾಮೀಣ ಭಾಗದ ಜನರ ಆರೋಗ್ಯವನ್ನೂ ಕಾಪಾಡಬಹುದು.
ಗ್ರಾಮಗಳ ಸಬಲೀಕರಣದ ಜತೆಗೆ ಸ್ವಚ್ಛತೆಗೆ ಆದ್ಯತೆ ನೀಡುವುದು ನಮ್ಮ ಇಲಾಖೆಯ ಮೂಲ ಧ್ಯೇಯ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.