Sports
ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಮಹಿಳಾ ತಂಡದ ಭರ್ಜರಿ ಗೆಲುವು.

ಚೆನ್ನೈ: ಎಮ್.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಭಾರತ ವಿರುದ್ಧ ದಕ್ಷಿಣ ಆಫ್ರಿಕಾ ಟಿ-20 ಪಂದ್ಯದಲ್ಲಿ, ಭಾರತ 10 ವಿಕೆಟ್ಗಳ ಭರ್ಜರಿ ಗೆಲುವನ್ನು ಸಾಧಿಸಿದೆ. ಈ ಮೂಲಕ ಸರಣಿಯನ್ನು ಸಮಾನವಾಗಿ ಎರಡು ತಂಡಗಳು ಗೆದ್ದಂತಾಗಿದೆ. ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಅದ್ಭುತ ಬೌಲಿಂಗ್ ತಂತ್ರಗಳಿಂದ ದಕ್ಷಿಣ ಆಫ್ರಿಕಾ ಹೀನಾಯ ಸೋಲು ಕಂಡಿದೆ.
ಟಾಸ್ ಗೆದ್ದ ಭಾರತೀಯ ತಂಡ ಮೊದಲು ಬೌಲಿಂಗ್ ಮಾಡಲು ನಿರ್ಣಯಿಸಿತು. 17.1 ಓವರ್ ಗಳಲ್ಲಿ ದಕ್ಷಿಣ ಆಫ್ರಿಕಾ ತಂಡ ತನ್ನ ಎಲ್ಲಾ ವಿಕೆಟ್ಗಳನ್ನು ಕಳೆದುಕೊಂಡು ಕೇವಲ 84 ರನ್ನುಗಳನ್ನು ಕಲೆ ಹಾಕಲು ಸಾಧ್ಯವಾಯಿತು. ಈ ಗುರಿಯನ್ನು ಬೆನ್ನಟ್ಟಿದ ಭಾರತೀಯ ತಂಡ 10.5 ಓವರ್ ಗಳಲ್ಲಿ, ಇನ್ನು 55 ಬೌಲ್ ಗಳು ಹಾಕಿ ಇರುವಾಗ, ಯಾವುದೇ ವಿಕೇಟುಗಳನ್ನು ನೀಡದೆ, 88 ರನ್ನುಗಳನ್ನು ಗಳಿಸಿ ಜಯ ಸಾಧಿಸಿತು.
ಈ ಪಂದ್ಯದಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು, ಪೂಜಾ ವಸ್ತ್ರಾಕರ್ ಅವರಿಗೆ ಸಂದಿದೆ.