Politics
“ರಾಜ್ಯಪಾಲರನ್ನು ಪ್ರಶ್ನಿಸಿದರೆ ಅದು ಅವಮಾನವೇ?” ಎಂದು ಖಡಕ್ ಪ್ರಶ್ನೆ ಎತ್ತಿದ ಸಿದ್ದರಾಮಯ್ಯ.
ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಿಜೆಪಿ ನಾಯಕರ ಆರೋಪಗಳಿಗೆ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ನಾಯಕರು ಕರ್ನಾಟಕ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ನಾಯಕರು ಅವಮಾನ ಮಾಡಿದ್ದಾರೆ ಎಂದು ಆರೋಪಿಸುತ್ತಿದ್ದಂತೆಯೇ, ಸಿಎಂ ಸಿದ್ಧರಾಮಯ್ಯ, “ನಾವು ರಾಜ್ಯಪಾಲರನ್ನು ಪ್ರಶ್ನಿಸಿದರೆ ಅದು ಅವಮಾನವೇ?” ಎಂದು ಪ್ರಶ್ನಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಶಶಿಕಲಾ ಜೊಲ್ಲೆ, ಮಾಜಿ ಸಚಿವ ಮುರುಗೇಶ ನಿರಾಣಿ ಹಾಗೂ ಜನಾರ್ಧನ ರೆಡ್ಡಿ ವಿರುದ್ಧ ಹಲವಾರು ದೂರುಗಳು ಬಂದಿವೆ. ಆದರೆ, ಈ ಪ್ರಕ್ರಿಯೆಯನ್ನು ಮುಂದುವರೆಸಲು ರಾಜ್ಯಪಾಲರಿಂದ ಅನುಮತಿ ಕೇಳಿದರೂ, ಅವರು ನಿರಾಕರಿಸಿದ್ದಾರೆ ಎಂದು ಹೇಳಿದ್ದಾರೆ.
“ರಾಜ್ಯಪಾಲರ ಹುದ್ದೆ ಸಾಂವಿಧಾನಿಕ. ಅವರು ರಾಷ್ಟ್ರಪತಿಯ ಪ್ರತಿನಿಧಿಯಾಗಿ ಕೆಲಸ ಮಾಡಲಿ. ಕೇಂದ್ರದ ಪ್ರತಿನಿಧಿಯಾಗಿ ವರ್ತಿಸಬೇಡಿ” ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.