BengaluruEntertainment
ಮೌನ ಮುರಿದ ಜಗ್ಗೇಶ್. ದರ್ಶನ್ ಕುರಿತು ಹೇಳಿಕೆ ಏನು?
ಬೆಂಗಳೂರು: ರಾಜ್ಯಸಭಾ ಸದಸ್ಯ ಹಾಗೂ ಕನ್ನಡ ಚಿತ್ರರಂಗದ ನವರಸ ನಾಯಕ ಜಗ್ಗೇಶ್ ಇಂದು ನಟ ದರ್ಶನ್ ಬಗ್ಗೆ ತಮ್ಮ ಪರೋಕ್ಷ ಹೇಳಿಕೆ ನೀಡಿದ್ದಾರೆ. “ರಾಮನಾಗು, ರಾವಣನಾದರೆ ಅಂತ್ಯ ಎಂದಿದೆ ಸನಾತನ ಕೃತಿ! ಮದಕ್ಕೆ ಕಾರುಣ್ಯದ ಅರಿವಿಲ್ಲ” ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.
ಸರ್ವ ಆತ್ಮಾನೇ ನಬೃಹ್ಮ, ಸರ್ವ ಜೀವಿಯಲ್ಲಿ ದೇವರಿದ್ದಾನೆ. ಯಾರನ್ನು ಕೊಲ್ಲುವ ಹಕ್ಕು ಜೀವನಿಗಿಲ್ಲಾ! ಕರ್ಮ ಜೀವನನ ಹಿಂದೆ ಹಿಂಬಾಲಿಸುತ್ತದೆ. ಅವನ ಪಾಪಕರ್ಮ ಅವನ ಸುಡುತ್ತದೆ! ಕಲಿಯುಗದಲ್ಲಿ ದೇವರು ಕಲ್ಲಲ್ಲ. ಎಲ್ಲಾ ಕರ್ಮಕ್ಕೂ ತಕ್ಷಣ ಫಲಿತಾಂಶ ಉಂಟು! ರಾಮನಾಗು ರಾವಣನಾದರೆ ಅಂತ್ಯ ಎಂದಿದೆ ಸನಾತನ ಕೃತಿ! ಮದಕ್ಕೆ ಕಾರುಣ್ಯದ ಅರಿವಿಲ್ಲ! ಎಂದು ಹೇಳಿದ್ದಾರೆ.