ಬೆಂಗಳೂರು: ಇಂದು ಲೋಕಸಭೆಗೆ ಎನ್‌ಡಿಎ ಮೈತ್ರಿ ಪಕ್ಷ ಜಾತ್ಯಾತೀತ ಜನತಾದಳ ತನ್ನ ಅಭ್ಯರ್ಥಿ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇಲ್ಲಿಯವರೆಗಿನ ಎಲ್ಲಾ ಕುತೂಹಲಗಳಿಗೆ ತೆರೆ ಎಳೆದಿದೆ.
ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಇದೀಗ ಉತ್ತರ ದೊರಕಿದೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ವತಃ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಎಚ್. ಡಿ. ಕುಮಾರಸ್ವಾಮಿ ಅವರೇ ಸ್ಪರ್ಧಿಸಲಿದ್ದಾರೆ. ಇದಾದ ನಂತರ ಹಾಸನ ಕ್ಷೇತ್ರದಲ್ಲಿ ಹಾಲಿ ಸಂಸದರಾದ ಪ್ರಜ್ವಲ್ ರೇವಣ್ಣ ಮತ್ತೊಮ್ಮೆ ಸ್ಪರ್ಧಿಸಲಿದ್ದಾರೆ.
ಕಳೆದ ಬಾರಿ ಬಿಜೆಪಿಯ ಪಾಲಾಗಿದ್ದ ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಈ ಬಾರಿ ಜೆಡಿಎಸ್ ಲಗ್ಗೆ ಇಟ್ಟಿದ್ದು, ತನ್ನ ನೂತನ ಅಭ್ಯರ್ಥಿಯಾಗಿ ಆರ್.ಸಿ. ಮಲ್ಲೇಶ್ ಬಾಬು ಕಣಕ್ಕಿಳಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.