Politics
800 ವರ್ಷಗಳ ಇತಿಹಾಸ ಹೊಂದಿರುವ ಕಲ್ಲೇಶ್ವರ ಸ್ವಾಮಿ ರಥ ಬೆಂಕಿಗೆ ಆಹುತಿ.
ತುಮಕೂರು: ಜಿಲ್ಲೆಯ ಗುಬ್ಬಿಯ ನಿಟ್ಟೂರುಪುರದ, ಸರಿಸುಮಾರು 800 ವರ್ಷಗಳ ಇತಿಹಾಸ ಹೊಂದಿರುವ ಕಲ್ಲೇಶ್ವರ ಸ್ವಾಮಿಯ ರಥಕ್ಕೆ ಕಿಡಿಗಿಡಿಗಳು ಬೆಂಕಿ ಹಚ್ಚಿದ್ದಾರೆ.
ಇದರ ವಿರುದ್ಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಕರ್ನಾಟಕ ಭಾರತೀಯ ಜನತಾ ಪಕ್ಷ ” ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಹಿಂದೂ ಧರ್ಮದ ಮೇಲೆ ಹಾಗೂ ಹಿಂದೂ ದೇವಾಲಯಗಳ ಮೇಲೆ ದಾಳಿ ನಿತ್ಯ ನಿರಂತರ, ಸಿಎಂ ಸಿದ್ದರಾಮಯ್ಯನವರೇ, ಇದು ನಿಮ್ಮ ಓಲೈಕೆ ಹಾಗೂ ಅರಾಜಕತೆಯ ಆಡಳಿತದ ದುಷ್ಪರಿಣಾಮ.” ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
“ಹಿಂದೂ ಧರ್ಮ, ಹಿಂದೂ ದೇವಾಲಯ, ಹಿಂದುಗಳ ಮೇಲಿನ ನಿಮಗೆ ಏಕೆ ಈ ಪರಿ ಅಸಡ್ಡೆ. ಹಿಂದುಗಳಿಗೆ ನಿಮ್ಮ ಆಡಳಿತದಲ್ಲಿ ರಕ್ಷಣೆ ಇಲ್ಲವೇ?” ಎಂದು ಪ್ರಶ್ನಿಸಿದ್ದಾರೆ.
ಕಲೆಶ್ವರ ಸ್ವಾಮಿ ದೇವಾಲಯ ಸಾವಿರಾರು ಭಕ್ತರನ್ನು ಒಳಗೊಂಡಿದ್ದು ಈ ಘಟನೆಯಿಂದಾಗಿ ಊರಿನ ಜನರಿಗೆ ಹಾಗೂ ಭಕ್ತಾದಿಗಳಿಗೆ ಅತೀವ ನೋವು ಉಂಟಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.