Politics
ಗಿಗ್ ಕಾರ್ಮಿಕರಿಗೆ ಬಂಪರ್ ಕೊಡುಗೆ ನೀಡಿದೆ ರಾಜ್ಯ ಸರ್ಕಾರ.
![](https://akeynews.com/wp-content/uploads/2024/07/13-780x470.jpg)
ಬೆಂಗಳೂರು: ಕರ್ನಾಟಕ ರಾಜ್ಯದ ಗಿಗ್ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ವಿಶೇಷವಾದ ವಿಮಾ ಯೋಜನೆಯನ್ನು ಹೊರ ತಂದಿದೆ. ಈ ಯೋಜನೆ ಮೂಲಕ ಗಿಗ್ ಕಾರ್ಮಿಕರ ಜೀವಕ್ಕೆ ಹಾಗೂ ಕುಟುಂಬಕ್ಕೆ ಒಂದು ಸಂರಕ್ಷಣೆ ಸಿಕ್ಕಂತಾಗಿದೆ.
![](https://akeynews.com/wp-content/uploads/2024/07/GSBgbawXwAA1TLu-660x1024.jpeg)
ಯಾರು ಈ ಗಿಗ್ ಕಾರ್ಮಿಕರು?
ಸ್ವಿಗ್ಗಿ, ಜೊಮಾಟೋಗಳಂತಹ ಸಂಸ್ಥೆಗಳಲ್ಲಿ ಫುಡ್‌ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೆಜಾನ್, ಪ್ಲಿಪ್‌ಕಾರ್ಟ್, ಬಿಗ್‌ಬಾಸ್ಕೆಟ್, ಪೋರ್ಟರ್, ಫಾರ್ಮಸಿ, ಬ್ಲಿಂಕಿಟ್, ಜೆಪ್ಪೋ, ಡಾಮಿನೋಜ್ ಮುಂತಾದ ಸಂಸ್ಥೆಗಳಲ್ಲಿ ಡೆಲಿವರಿ ವೃತ್ತಿಯಲ್ಲಿ ತೊಡಗಿಕೊಂಡ ಎಲ್ಲಾ ಅಸಂಘಟಿತ ಕಾರ್ಮಿಕರೇ ಈ ಗಿಗ್ ಕಾರ್ಮಿಕರು.
ಯೋಜನೆಯ ವಿಶೇಷತೆಗಳು
- ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ ದೇಶದಲ್ಲಿಯೇ ಮೊದಲ ಬಾರಿಗೆ ಜಾರಿ.
- ಎಲ್ಲಾ ಅರ್ಹ ಗಿಗ್ ಕಾರ್ಮಿಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳುವುದು.
- ವಿಮಾ ಸೌಲಭ್ಯವು ಕರ್ತವ್ಯದಲ್ಲಿರುವಾಗ / ಇಲ್ಲದಿರುವಾಗ ಸಂಭವಿಸುವ ಅಪಘಾತಗಳಿಗೂ ಅನ್ವಯ.
- ಯೋಜನೆಯು ಸಂಪೂರ್ಣ ಉಚಿತ, ಯಾವುದೇ ರೀತಿಯ ಪ್ರೀಮಿಯಂ ಪಾವತಿಸುವ ಅಗತ್ಯತೆ ಇಲ್ಲ.
ದೊರಕುವ ಸೌಲಭ್ಯಗಳು
- ಅಪಘಾತದಿಂದ ಮರಣ ಹೊಂದಿದಲ್ಲಿ ವಿಮಾ ಪರಿಹಾರ ರೂ 2.00 ಲಕ್ಷ ಹಾಗೂ ಜೀವ ವಿಮೆ ರೂ 2.00 ಲಕ್ಷ ಸೇರಿ ಒಟ್ಟು ರೂ. 4.00 ಲಕ್ಷಗಳು.
- ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ ರೂ. 2.00 ಲಕ್ಷಗಳವರೆಗೆ. ಆಸ್ಪತ್ರೆ ವೆಚ್ಚ ಮರುಪಾವತಿ ರೂ.1.00 ಲಕ್ಷಗಳವರೆಗೆ (ಅಪಘಾತ ಪ್ರಕರಣಗಳಿಗೆ ಮಾತ್ರ)
- ಜೀವ ವಿಮಾ ರೂ. 2.00 ಲಕ್ಷಗಳು
ನೋಂದಣಿಗೆ ಅರ್ಹತೆ
- 18 ರಿಂದ 60 ವಯೋಮಾನದವರು.
- ಆದಾಯ ತೆರಿಗೆ ಪಾವತಿದಾರರಾಗಿರಬಾರದು.
- ಭವಿಷ್ಯನಿಧಿ ಹಾಗೂ ಇ.ಎಸ್.ಐ ಫಲಾನುಭವಿಯಾಗಿರಬಾರದು.
- ಕರ್ನಾಟಕದಲ್ಲಿ ಗಿಗ್ ವೃತ್ತಿ (ಡೆಲಿವರಿ ಕಾರ್ಯ) ನಿರ್ವಹಿಸುತ್ತಿರುವವರಿಗೆ ಮಾತ್ರ.
ಅವಶ್ಯಕ ದಾಖಲೆಗಳು
- ಆಧಾರ್ ಸಂಖ್ಯೆ
- ವೃತ್ತಿ ನಿರ್ವಹಿಸುತ್ತಿರುವ ಸಂಸ್ಥೆಗಳು ವಿತರಿಸಿದ ಗುರುತಿನ ಚೀಟಿ
ರಾಜ್ಯ ಸರ್ಕಾರದ ಈ ಯೋಜನೆಯ ಫಲವನ್ನು ಈಗಲೇ ಪಡೆಯಿರಿ.