ಬೆಂಗಳೂರು: ನಿನ್ನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು, ಭಾರತದ ರೈತರಿಗೆ ಕಿಸಾನ್ ಸಮ್ಮಾನ್ ನಿಧಿಯ 17ನೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ. ಈ ಮೂಲಕ ₹2000 ಹಣವು ನೇರವಾಗಿ ರೈತರ ಖಾತೆಗೆ ಜಮಾ ಆಗಲಿದೆ.
ರಾಜ್ಯದಲ್ಲಿ ಕಳೆದ ವರ್ಷದ ಬರ ಪರಸ್ಥಿತಿಯಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದರು. ಇಂತಹ ಸಂದರ್ಭದಲ್ಲಿ ರೈತರಿಗೆ ಸಹಾಯಧನ ದೊರೆತಿರುವುದರಿಂದ ಕೃಷಿ ಚಟುವಟಿಕೆಗೆ ಸಹಕಾರಿಯಾಗಿದೆ. ಎಂದು ಕರ್ನಾಟಕದ ರೈತರು ಮಾದ್ಯಮಗಳಿಗೆ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ 17ನೇ ಕಂತಿಗಾಗಿ 20,000 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದ್ದಾರೆ. ಈ ಯೋಜನೆಯನ್ನು 2019ರಲ್ಲಿ ಜಾರಿಗೆ ತರಲಾಯಿತು. ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ವರ್ಷಕ್ಕೆ 6000 ರೂಪಾಯಿ ಸಹಾಯಧನ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ.