ಕೋಲ್ಕತ್ತಾ ಅತ್ಯಾಚಾರ ಪ್ರಕರಣ: ರಾಜೀನಾಮೆ ನೀಡಿದ ಕಾಲೇಜು ಪ್ರಾಂಶುಪಾಲ.
ಕೋಲ್ಕತಾ: ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದ ಆರ್.ಜಿ. ಕಾರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ 31 ವರ್ಷದ ಮಹಿಳಾ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯ ಪ್ರಕರಣದ ವಿರುದ್ಧ ಪ್ರತಿಭಟನೆಗೆ ತೊಡಗಿದ್ದ ವೈದ್ಯರು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು, ನಾಲ್ಕು ದಿನಗಳಾದರೂ ಬಿಡದೆ ಹೋರಾಟವನ್ನು ಮುಂದುವರಿಸಿದ್ದಾರೆ.
ಈ ಹಿನ್ನಲೆಯಲ್ಲಿ, ಆರ್.ಜಿ. ಕಾರ್ ಮೆಡಿಕಲ್ ಕಾಲೇಜು ಪ್ರಾಂಶುಪಾಲ ಡಾ. ಸಂದೀಪ್ ಘೋಷ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಡಾ. ಘೋಷ್ ಅವರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆಗಳು ಮುಗಿಬಿದ್ದಿದ್ದು, ಈ ಹಿನ್ನೆಲೆಯಲ್ಲಿಯೇ ಅವರು ತಮ್ಮ ರಾಜೀನಾಮೆ ನಿರ್ಧಾರ ತೆಗೆದುಕೊಂಡಿದ್ದಾರೆ. ಅವರು ಪತ್ರಕರ್ತರಿಗೆ ಮಾತನಾಡಿ, ಅಹಿತಕರ ಘಟನೆ ಸಂಬಂಧ ತಾವು ದೂಷಿತರಾಗುತ್ತಿರುವುದಾಗಿ ಹೇಳಿದರು,ಮತ್ತು ತೀವ್ರ ನೋವನ್ನು ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳು ಮತ್ತು ವೈದ್ಯರು, ಈ ಪ್ರಕರಣದಲ್ಲಿ ನ್ಯಾಯದ ಜೊತೆಗೆ, ಡಾ. ಘೋಷ್ ಅವರ ರಾಜೀನಾಮೆಯನ್ನು ಕೂಡ ನಿರೀಕ್ಷಿಸುತ್ತಿದ್ದರು, ಈ ಘಟನೆ ಆಸ್ಪತ್ರೆಯ ಪರಿಸರದಲ್ಲಿ ಮೂಡಿಬಂದ ಆತಂಕವನ್ನು ತೀವ್ರಗೊಳಿಸಿದೆ.