CinemaEntertainment

ಕೋಟಿಯ ಮೊದಲ‌ ಟಿಕೇಟ್ ‘ಕಿಚ್ಚ’ನಿಗೆ

ಈಗಾಗಲೇ ‘ಕೋಟಿ’ ಚಿತ್ರದ ಟ್ರೇಲರ್ ಬಿಡುಗಡೆಗೊಂಡಿದ್ದು ಭಾರಿ ಮೆಚ್ಚುಗೆ ಗಳಿಸುತ್ತಿದೆ. ಡಾಲಿ ಧನಂಜಯ್ ‘ಕೋಟಿ’ ಎಂಬ ಒಬ್ಬ ಸಾಮಾನ್ಯ ಡ್ರೈವರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕೋಟಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂಪಾಯಿ ದುಡಿದು ತನ್ನ‌ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ. ಕೋಟಿಯ ಈ ಪಯಣದ ಕಥಾಹಂದರವನ್ನು‌ ಹೊಂದಿರುವ ಈ ಸಿನಿಮಾ ಜೂನ್ 14ಕ್ಕೆ ಬಿಡುಗಡೆಯಾಗಲಿದೆ.

ವರ್ಷದ ಮೊದಲಾರ್ಧದಲ್ಲಿ ಯಾವುದೇ ದೊಡ್ಡ ಗೆಲುವು ಕಾಣದೆ ಕಂಗೆಟ್ಟಿರುವ ಕನ್ನಡ ಇಂಡಸ್ಟ್ರಿಗೆ ಅಪ್ಪಟ ಕನ್ನಡ ಮಣ್ಣಿನ ಕತೆಯಾದ ‘ಕೋಟಿ’ ಗೆಲ್ಲುವ ಭರವಸೆಯಾಗಿ ಕಂಡಿದೆ.

ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಮತ್ತು ಖಳನಾಯಕನಾಗಿ ರಮೇಶ್ ಇಂದಿರಾ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್‌ ಸತ್ಯ ಜತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಅಭಿನಯಿಸಿದ್ದಾರೆ.

ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು 777 ಚಾರ್ಲಿ ಖ್ಯಾತಿಯ ನೊಬಿನ್‌ ಪೌಲ್‌ ಹೊತ್ತಿದ್ದಾರೆ. ಕಾಂತಾರ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್‌ ಶೆಟ್ಟಿಯವರು‌ ಕೋಟಿಯ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಸಿನಿಮಾದ ಕ್ಯಾಮರಮನ್.

ಈ ಸಿನೆಮಾವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಕಲರ್ಸ್ ಕನ್ನಡವನ್ನು ದಶಕಗಳ ಕಾಲ ಮುನ್ನಡೆಸಿದ್ದ ಪರಮ್‌ ಅವರು ಬರೆದು ನಿರ್ದೇಶಿಸಿದ್ದಾರೆ. ʼಕೋಟಿʼ ಜೂನ್‌ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

Show More

Related Articles

Leave a Reply

Your email address will not be published. Required fields are marked *

Back to top button