ನಾಲ್ಕುನೇ ದಿನಕ್ಕೆ ಕಾಲಿಟ್ಟ ಲಾರಿ ಮುಷ್ಕರ…!

4 ದಿನವದರು ಲಾರಿ ಮುಷ್ಕರದ ಹೋರಟ ಮುಂದುವರಿದಿದೆ.ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯ.ಡೀಸಲ್ ಇಳಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಲಾರಿ ಮಾಲೀಕರು ಮಂಗಲವಾರದಿಂದ ಆರಂಭಿಸಿರುವ ಮುಷ್ಕರ ಸದ್ಯಕ್ಕೆ ಮುಗಿಯುವ ಲಕ್ಷಣ ಕಾಣಿಸುತ್ತಿಲ್ಲ. ಮುಷ್ಕರ ಕೈಬಿಡುವಂತೆ ಲಾರಿ ಮಾಲೀಕರ ಸಂಘದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆದ ಸಂಧಾನ ಸಭೆ ವಿಫಲವಾಗಿದೆ. ಮುಷ್ಕರ ನಿಲ್ಲಿಸುವಂತೆ ಸಿದ್ದರಾಮಯ್ಯ ಅವರು ಹೇಳಿದರೂ ಲಾರಿ ಮಾಲೀಕರ ಸಂಘ ಒಪ್ಪಿಲ್ಲ. ಯಾವುದೇ ಕಾರಣಕ್ಕೂ ಮುಷ್ಕರದಿಂದ ಹಿಂದೆ ಸರಿಯಲ್ಲ. ನಾವು ತೀರ್ಮಾನ ಮಾಡಿಯಾಗಿದೆ. ಮುಖ್ಯಮಂತ್ರಿಗಳು ಮುಷ್ಕರ ಹಿಂಪಡೆಯಲು ಹೇಳಿದ್ದಾರೆ. ಆದ್ರೆ ಆಗಲ್ಲ ಎಂದಿದ್ದೇವೆ. ಏ.15 ದಿಂದ ಅನಿರ್ದಿಷ್ಟಾವಧಿ ಉಗ್ರ ಹೋರಾಟ ಮಾಡ್ತೇವೆ ಎಂದು ಹೇಳಿದರು.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ಆರಂಭಿಸಿರುವ ಲಾರಿ ಮಾಲೀಕರು ಮತ್ತು ಏಜೆಂಟರ ಸಂಘದ ಪದಾಧಿಕಾರಿಗಳೊಂದಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ನಡೆಸಿದ ಎರಡು ಸುತ್ತಿನ ಸಂಧಾನ ಸಭೆಗಳು ಫಲ ನೀಡಿಲ್ಲ. ಇದರಿಂದಾಗಿ ಲಾರಿ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದೆ. ಮಾರುಕಟ್ಟೆ ಮತ್ತಿತರ ಸ್ಥಳಗಳಿಗೆ ಅಗತ್ಯವಸ್ತುಗಳು, ಎಲೆಕ್ಟ್ರಾನಿಕ್ಸ್, ಸರಕು ಸಾಗಣಿಕೆ ವಾಹನಗಳ ಸೇರಿ ಸುಮಾರು 6 ಲಕ್ಷ ಲಾರಿಗಳು ರಾಜ್ಯದಾದ್ಯಂತ ಸಂಚಾರ ಸ್ಥಗಿತಗೊಳಿಸಿವೆ ಎಂದು ಸಂಘದ ಮಾಲೀಕರು ಹೇಳಿದ್ದಾರೆ. ರಾಜ್ಯ ಸರಕಾರ ರಸ್ತೆಗಳ ಸುಧಾರಣೆಗೆ ಪ್ರತಿ ವರ್ಷ ಸುಮಾರು 14 ಸಾವಿರ ಕೋಟಿ ರೂ. ವೆಚ್ಚ ಮಾಡುತ್ತಿದೆ. ಹಾಗೂ 83 ಸಾವಿರ ಕೋಟಿ ರೂ. ಈ ವರ್ಷ ಬಂಡವಾಳ ವೆಚ್ಚಕ್ಕೆ ಮೀಸಲಿರಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಈ ಬಾರಿ ಬಜೆಟ್‌ನಲ್ಲಿ ಡಿಸೇಲ್ ಮೇಲಿನ ಸುಂಕ ರೂ.2 ಹೆಚ್ಚಳ ಮಾಡಲಾಗಿದೆ. ಆದರೆ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಡಿಸೇಲ್ ದರ ನಮ್ಮ ರಾಜ್ಯದಲ್ಲಿ ಕಡಿಮೆಯಿದೆ. ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮುಷ್ಕರವನ್ನು ಕೈಬಿಡುವಂತೆ ಮನವಿ ಮಾಡುತ್ತೇನೆ. ಲಾರಿ ಮಾಲಿಕರ ಸಂಘದ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಅರಿವಿದೆ. ಸರ್ಕಾರ ಬಡವರ ಪರವಾಗಿದ್ದು ಸರ್ಕಾರದೊಂದಿಗೆ ಲಾರಿ ಮಾಲೀಕರು ಸಹಕರಿಸಬೇಕು. ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಪ್ರತಿ ವರ್ಷ ಸುಮಾರು 14 ಸಾವಿರ ಕೋಟಿ ರೂ. ವೆಚ್ಚ ಮಾಡುತ್ತಿದೆ ಎಂದುಹೇಳಿದ್ದಾರೆ.

ಒಟ್ಟಾರೆಯಾಗಿ ಸರ್ಕಾರದಿಂದ ನಮಗೆ ಸೂಕ್ತ ಸ್ಪಂದನೆ ಸಿಗದ ಪರಿಣಾಮ ಮುಂದಿನ 2 ದಿನಗಳಲ್ಲಿ ಇನ್ನಷ್ಟು ತೀವ್ರವಾಗಿ ಮುಷ್ಕರ ನಡೆಸಲು ನಿರ್ಧರಿಸಲಾಗಿದೆ. ಇದರಿಂದ ಜನಜೀವನ ಅಸ್ತವ್ಯಸ್ತವಾಗುವ ಸಾಧ್ಯತೆ ಇದೆ. ತರಕಾರಿ, ಹಾಲು ಸಾಗಿಸುವ ವಾಹನಗಳನ್ನು ಸದ್ಯದಲ್ಲೇ ನಿಲ್ಲಿಸುಲಾಗುವುದಿಲ್ಲ.
ಸಂಗೀತ .ಎಸ್
ಆಲ್ಮಾ ನ್ಯೂಸ್ ವಿದ್ಯಾರ್ಥಿನಿ