ಮೌನಿ ಅಮಾವಾಸ್ಯೆ ದಿನ ಮಹಾಕುಂಭ ಮೇಳದಲ್ಲಿ ೧೫ ಸಾವು! |Mahakumbh Stampede
ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಬುಧವಾರ(ಜನವರಿ 29), ಕಾಲ್ತುಳಿತಕ್ಕೆ ಸಿಲುಕಿ ಸುಮಾರು ೧೫ ಜನರು ಸಾವನ್ನಪ್ಪಿದ್ದಾರೆ ಮತ್ತು ಮಹಿಳೆಯರು ಮಕ್ಕಳು ಸೇರಿದಂತೆ ಅನೇಕರು ಗಾಯ ಗೊಂಡಿದ್ದಾರೆ. ಗಾಯ ಗೊಂಡಿರುವವರನ್ನ ತಕ್ಷಣವೇ ಆಂಬುಲೆನ್ಸ್ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಅಧಿಕಾರಿಯೊಬ್ಬರು ಹೇಳುವ ಪ್ರಕಾರ ಮೌನಿ ಅಮಾವಾಸ್ಯೆಯ ದಿನ ಅಪಾರ ಸಂಖ್ಯೆಯಲ್ಲಿ ಭಕ್ತರು ಪವಿತ್ರ ಸ್ನಾನಕ್ಕೆ ಆಗಮಿಸಿದ ಕಾರಣ ಸಂಗಮದಲ್ಲಿ ಕಾಲ್ತುಳಿತಂಥ ಪರಿಸ್ಥಿತಿ ನಿರ್ಮಾಣವಾಗಿದೆ.
ಪ್ರಧಾನ ಮಂತ್ರಿ ಮೋದಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಪರಿಸ್ಥಿತಿಯನ್ನು ಪರಿಶೀಲಿಸಿ ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ಕರೆ ನೀಡಿದ್ದಾರೆ.
ಪ್ರಿಯ ಭಕ್ತರೇ ಪ್ರಯಾಗ್ರಾಜ್ಗೆ ಬನ್ನಿ..ಯಾವುದೇ ವದಂತಿಗಳಿಗೆ ಕಿವಿ ಕೊಡಬೇಡಿ!
“ನೀವಿರುವ ಗಂಗಾ ಮಾತೆಯ ಹತ್ತಿರದ ಘಾಟ್ಗಳಲ್ಲಿ ಸ್ನಾನ ಮಾಡಿ ಸಂಗಮದ ಕಡೆ ಹೋಗಲು ಪ್ರಯತ್ನಿಸಬೇಡಿ….ಭಕ್ತರು ಆಡಳಿತದ ಸೂಚನೆಗಳನ್ನು ಪಾಲಿಸಿ ವ್ಯವಸ್ಥೆ ಜೊತೆಗೆ ಸಹಕರಿಸಬೇಕು;
ಸಂಗಮದ ಎಲ್ಲ ಘಾಟ್ಗಳಲ್ಲಿ ಜನರು ಶಾಂತಿಯುತವಾಗಿ ಸ್ನಾನ ಮಾಡುತ್ತಿದ್ದಾರೆ.. ಯಾವುದೇ ವದಂತಿಗಳಿಗೆ ಕಿವಿ ಕೊಡಬೇಡಿ” ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ Yogi Adityanath (ಯೋಗಿ ಆದಿತ್ಯನಾಥ್) ತಮ್ಮ X ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಪ್ರಧಾನಿ ಮೋದಿ ಸಂತಾಪ
“ಪ್ರಯಾಗ್ರಾಜ್ನಲ್ಲಿ ಮಹಾಕುಂಭದಲ್ಲಿ ಸಂಭವಿಸಿದ ಅಪಘಾತವು ಅತ್ಯಂತ ದುಃಖಕರವಾಗಿದೆ, ಇದರಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಭಕ್ತರಿಗೆ ನನ್ನ ತೀವ್ರ ಸಂತಾಪ, ಗಾಯಗೊಂಡವರೆಲ್ಲ ಬೇಗ ಗುಣಮುಖರಾಗಲಿ ಎಂದು ನಾನು ಬಯಸುತ್ತೇನೆ.ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ರೀತಿಯಲ್ಲಿ ಸಹಾಯ ಮಾಡಲು ತೊಡಗಿದೆ. ಈ ನಿಟ್ಟಿನಲ್ಲಿ ನಾನು ಮುಖ್ಯಮಂತ್ರಿ ಯೋಗಿ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ನಾನು ರಾಜ್ಯ ಸರ್ಕಾರದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ”. ಎಂದು ತಮ್ಮ X ಖಾತೆಯಲ್ಲಿ ಹಂಚಿಕೊಂಡಿದ್ದಾರೆ.