Politics
ಮಲ್ಲಿಕಾರ್ಜುನ ಖರ್ಗೆ ಅಸ್ವಸ್ಥ: ಕರೆ ಮಾಡಿ ಆರೋಗ್ಯ ವಿಚಾರಿಸಿದ ನರೇಂದ್ರ ಮೋದಿ!

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜಮ್ಮು ಮತ್ತು ಕಾಶ್ಮೀರದ ಕತಾ ಜಿಲ್ಲೆಯ ಜಸರೋಟಾ ಪ್ರದೇಶದಲ್ಲಿ ಸಭೆಯೊಂದರಲ್ಲಿ ಮಾತನಾಡುತ್ತಿದ್ದ ವೇಳೆ ಅನಾರೋಗ್ಯಕ್ಕೆ ಒಳಗಾದರು. ವೈದ್ಯಕೀಯ ಸಹಾಯ ಪಡೆದು, “ನರೇಂದ್ರ ಮೋದಿಯನ್ನು ಅಧಿಕಾರದಿಂದ ತೆಗೆದುಹಾಕುವವರೆಗೆ ನಾನು ಸಾಯೋಲ್ಲ” ಎಂದು ಹೇಳಿದ್ದಾರೆ.
ಖರ್ಗೆ ಅವರಿಗೆ ತಕ್ಷಣ ವೈದ್ಯರು ತಪಾಸಣೆ ನಡೆಸಿದ್ದು, ಅವರು ಪ್ರಸ್ತುತ ಸ್ಥಿರ ಸ್ಥಿತಿಯಲ್ಲಿದ್ದಾರೆ. ಸಭೆಯ ಮಧ್ಯದಲ್ಲಿ ಖರ್ಗೆ ಅವರಿಗೆ ಆರೋಗ್ಯದ ತೊಂದರೆ ಉಂಟಾದ ಸುದ್ದಿ ಕಾಂಗ್ರೆಸ್ ಶಿಬಿರದಲ್ಲಿ ಆತಂಕವನ್ನುಂಟುಮಾಡಿದೆ.
ಮೆಚ್ಚುಗೆಗೆ ಪಾತ್ರವಾದ ಘಟನೆ ಎಂದರೆ, ಪ್ರಧಾನಿ ನರೇಂದ್ರ ಮೋದಿ ಕೂಡ ಖರ್ಗೆ ಅವರಿಗೆ ಕರೆಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಪ್ರಧಾನಿಯ ಈ ನಡೆ ರಾಜಕೀಯ ವಲಯದಲ್ಲಿ ಸದ್ದು ಮಾಡಿದ್ದು, ವಿರೋಧ ಪಕ್ಷದ ನಾಯಕರ ಆರೋಗ್ಯದ ಕುರಿತು ಕಾಳಜಿ ವಹಿಸಿದ ಪ್ರಧಾನಿ ಮೋದಿಯವರ ಈ ನಡೆ ದೇಶದ ರಾಜಕೀಯ ಕ್ಷೇತ್ರದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.