ಸಮಾವೇಶದ ಮಾರ್ಗ ಮಧ್ಯೆ ಆಹಾರ ಸಚಿವರ ಕಾರು ಅಪಘಾತ…!

ಹಾಸನದಲ್ಲಿ ಇಂದು (ಡಿ.5) ಜನಕಲ್ಯಾಣ ಸಮಾವೇಶ ನಡೆಯುತ್ತಿದ್ದು, ಸಮಾವೇಶಕ್ಕೆ ತೆರಳುತ್ತಿದ್ದ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರ ಕಾರು ಅಪಘಾತಕ್ಕೀಡಾಗಿದೆ. ಶಾಂತಿಗ್ರಾಮ ರಸ್ತೆಯ ಮೂಲಕ ಹಾಸನಕ್ಕೆ ಆಗಮಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಶುಲ್ಕ ವಸೂಲಾತಿ ಕೇಂದ್ರದ ಬಳಿ ಹಿಂಬದಿಯಿಂದ ಬಂದ ಇನ್ನೋವಾ ಕಾರು ನಿಯಂತ್ರಣಕ್ಕೆ ಸಿಗದೇ ಸಚಿವರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಅಪಘಾತದಿಂದ ಕಾರು ಹಾನಿಗೀಡಾಗಿದೆ. ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸಚಿವ ಮುನಿಯಪ್ಪ ಸುರಕ್ಷಿತವಾಗಿದ್ದು, ಮತ್ತೊಂದು ಕಾರಿನ ಸಹಾಯದಿಂದ ಹಾಸನದ ಸಮಾವೇಶಕ್ಕೆ ತೆರಳಿದ್ದಾರೆ. ಹಾಸನ ಸಮಾವೇಶದಲ್ಲಿ ಪಾಲ್ಗೊಳ್ಳುವ ಕಾರ್ಯಕ್ರಮದಲ್ಲಿ ಯಾವುದೇ ವ್ಯತ್ಯಾಸ ಉಂಟಾಗಿಲ್ಲ.

ಜನಕಲ್ಯಾಣ ಸಮಾವೇಶಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಹಾಗೂ ಸ್ವಾಭಿಮಾನಿ ಸಂಘಟನೆಗಳ ಆಶ್ರಯದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ಸ್ಥಳಕ್ಕೆ ಶಾಂತಿಗ್ರಾಮದ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮತ್ತಷ್ಟು ಮಾಹಿತಿ ಕಲೆಹಾಕುವ ಕಾರ್ಯ ನಡೆಯುತ್ತಿದೆ. ಘಟನೆಗೆ ಕಾರಣವಾದ ಕಾರು ಮತ್ತು ಅದರ ಚಾಲಕನ ಕುರಿತು ಶಾಂತಿಗ್ರಾಮದ ಪೋಲೀಸರು ತನಿಖೆ ಮಾಡುತ್ತಿದ್ದಾರೆ.
ಹೇಮ ಎನ್.ಜೆ
ಆಲ್ಮಾ ಮೀಡಿಯಾ ಸ್ಕೂಲ್ ವಿದ್ಯಾರ್ಥಿನಿ