
ಬೆಂಗಳೂರು: ಕರ್ನಾಟಕದ ಪ್ರಸಿದ್ಧ ಪೀಠಾಧಿಪತಿಗಳೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿ, ಮುಸ್ಲಿಂ ಸಮುದಾಯದ ಮತದಾನದ ಹಕ್ಕು ರದ್ದುಪಡಿಸುವಂತೆ ಹಾಗೂ ವಕ್ಫ್ ಬೋರ್ಡ್ ಅನ್ನು ರದ್ದುಪಡಿಸಲು ಆಗ್ರಹಿಸಿದ್ದಾರೆ. ಈ ಹೇಳಿಕೆಯು ರಾಜ್ಯ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ಪೀಠಾಧಿಪತಿಗಳು ತಮ್ಮ ಭಾಷಣದಲ್ಲಿ, ವಕ್ಫ್ ಬೋರ್ಡ್ ಮುಸ್ಲಿಂ ಸಮುದಾಯಕ್ಕೆ ಅನೇಕ ಸ್ವತಂತ್ರ ಅವಕಾಶಗಳನ್ನು ಒದಗಿಸುತ್ತಿದ್ದು, ಇದರಿಂದ ಸಮಾಜದಲ್ಲಿ ಅಸಮಾನತೆ ಉಂಟಾಗುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಮುಸ್ಲಿಂ ಸಮುದಾಯದ ಮತದಾನದ ಹಕ್ಕುಗಳನ್ನು ರದ್ದುಪಡಿಸುವ ಮೂಲಕ ದೇಶದ ಏಕತೆಯನ್ನು ಕಾಪಾಡಲು ಸಾಧ್ಯವೆಂದು ಅವರು ವಾದಿಸಿದರು.
ಈ ಹೇಳಿಕೆ ವಿರುದ್ಧ ಮುಸ್ಲಿಂ ನಾಯಕರು ಮತ್ತು ಸಮಾಜದ ವಿವಿಧ ವಲಯಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಹೇಳಿಕೆಯನ್ನು ಸಂವಿಧಾನ ವಿರೋಧಿ ಮತ್ತು ಕೋಮು ಸೌಹಾರ್ಧವನ್ನು ಹಾಳು ಮಾಡುವಂತದ್ದೆಂದು ಟೀಕಿಸಲಾಗಿದೆ. ಮೌಲಾನಾ ಮತ್ತು ಮುಸ್ಲಿಂ ಸಂಘಟನೆಗಳು ಈ ರೀತಿಯ ಹೇಳಿಕೆಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಆಗ್ರಹಿಸಿವೆ.
ರಾಜ್ಯ ಸರ್ಕಾರವು ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆಯೆಂದು ತಿಳಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು, ಇಂತಹ ಕೃತ್ಯಗಳಿಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.