Politics

ಕಾಂಗ್ರೆಸ್ ವಿರುದ್ಧ ಮೈಸೂರು ಚಲೋ: ಪರಿಣಾಮ ಬೀರುವುದೇ ಈ ಪಾದಯಾತ್ರೆ?

ಮೈಸೂರು: ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಜೆಡಿಎಸ್ ಪಕ್ಷದ ಪ್ರಮುಖ ಮುಖಂಡರು, ಇದು ನಾಡದೇವತೆ ಚಾಮುಂಡೇಶ್ವರಿಯ ಆಶೀರ್ವಾದ ಪಡೆದು ಮೈಸೂರು ಚಲೋ ಪಾದಯಾತ್ರೆಯನ್ನು ಪ್ರಾರಂಭಿಸಿದರು. ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಹಗರಣಗಳಾದಂತಹ ಮುಡಾ ಹಗರಣ, ವಾಲ್ಮೀಕಿ ನಿಗಮ ಹಗರಣ ಹೀಗೆ ಕಾಂಗ್ರೆಸ್ ಸರ್ಕಾರದ ಕುತ್ತಿಗೆಗೆ ಸುತ್ತಿಕೊಂಡಿರುವ ಹತ್ತು ಹಲವು ಹಗರಣಗಳ ವಿರುದ್ಧ ಭಾರಿ ಪ್ರಮಾಣದ ಜನ ಜಾಗೃತಿ ಮೂಡಿಸುವ ಗಮನಾರ್ಹ ಪ್ರತಿಭಟನೆ ಇದಾಗಿದೆ.

ಪಾದಯಾತ್ರೆಯ ಸಕಾರಾತ್ಮಕ ಪರಿಣಾಮಗಳ ಆಗಮನವನ್ನು ಕಾಯುತ್ತಿರುವ ಬಿ.ವೈ. ವಿಜಯೇಂದ್ರ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ, “ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ, ನಾಡ ಅಧಿದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನಾಶೀರ್ವಾದ ಪಡೆಯಲಾಯಿತು. ನಿವೇಶನ ವಂಚಿತ ಸೂರು ರಹಿತರಿಗಾಗಿ, ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ ಮೀಸಲಾದ ಹಣದ ರಕ್ಷಣೆಗಾಗಿ, ಭ್ರಷ್ಟ ಅಧಿಕಾರಸ್ಥರಿಗೆ ಶಿಕ್ಷೆ ಕೊಡಿಸುವುದಕ್ಕಾಗಿ, ಜನವಿರೋಧಿ ಕಾಂಗ್ರೆಸ್‌ ಸರ್ಕಾರ ವಿರದ್ಧದ ಹೋರಾಟ ತಾರ್ಕಿಕ ಅಂತ್ಯ ಕಾಣುವವರೆಗೂ ನಮ್ಮ ಹೋರಾಟಕ್ಕೆ ತಾಯಿ ಶ್ರೀ ಚಾಮುಂಡೇಶ್ವರಿಯ ಅನುಗ್ರಹಕ್ಕಾಗಿ ನಿವೇದಿಸಿಕೊಳ್ಳಲಾಯಿತ್ತಲ್ಲದೇ ಪ್ರಾಕೃತಿಕ ವಿಕೋಪದಿಂದ ಬೆಟ್ಟ, ಗುಡ್ಡಗಳು ಕುಸಿದು ಜಲಕಂಟಕಕ್ಕೆ ಸಿಲುಕಿ ತೀವ್ರ ಸಂಕಷ್ಟ ಅನುಭವಿಸುತ್ತಿರುವ ಜನರ ಒಳತಿಗಾಗಿ ದೇವಿಯಲ್ಲಿ ಪ್ರಾರ್ಥಿಸಲಾಯಿತು.

ಪಾದಯಾತ್ರೆಯ ಪ್ರಾರಂಭದ ದಿನವಾದ ಇಂದಿನಿಂದ ಕೊನೆಯ ದಿನದವರೆಗೂ ಬಿಜೆಪಿ ಹಾಗೂ ಜೆಡಿಎಸ್ ನ ಪ್ರಮುಖರು ಹಾಗೂ ಕಾರ್ಯಕರ್ತರು ಜೊತೆಗೂಡಿ ವಿಶ್ವಾಸಪೂರ್ಣ ಹೆಜ್ಜೆಯನ್ನಿಟ್ಟು ಪ್ರತಿಭಟನೆಯನ್ನು ಪರಿಣಾಮಕಾರಿಯಾಗಿ ಹಂತ ತಲುಪಿಸುವ ಸಂಕಲ್ಪ ಮಾಡೋಣ.” ಎಂದು ಹೇಳಿಕೊಂಡಿದ್ದಾರೆ.

ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷವು ಕೂಡ ಭಾರತೀಯ ಜನತಾ ಪಕ್ಷ ರಾಜ್ಯದಲ್ಲಿ ಅಧಿಕಾರದಲ್ಲಿರುವ ಸಂದರ್ಭದಲ್ಲಿ, ಭ್ರಷ್ಟಾಚಾರ ಹಗರಣಗಳನ್ನು ಕೈಗೊಂಡಿದೆ ಎಂದು ಆರೋಪಿಸಿ, ರಾಜ್ಯದಾದ್ಯಂತ ಜನಜಾಗೃತಿ ಮೂಡಿಸಲು ಮುಂದಾಗಿದೆ. ಒಟ್ಟಿನಲ್ಲಿ ಪಾದಯಾತ್ರೆಗಳು ಕೇವಲ ರಾಜಕಾರಣಿಗಳ ಪಾದ ಸವಿಸುವುದೋ, ಅಥವಾ ರಾಜ್ಯಕ್ಕೆ ಹಿತವನ್ನು ಉಂಟುಮಾಡುವ ಏನಾದರೂ ಬದಲಾವಣೆಯನ್ನು ತರುವುದೋ ಎಂದು ಮುಂದೆ ನೋಡಬೇಕಿದೆ.

Show More

Leave a Reply

Your email address will not be published. Required fields are marked *

Related Articles

Back to top button