Politics
ಜೂನ್ 08ಕ್ಕೆ ಪ್ರಮಾಣವಚನ ಸ್ವೀಕಾರ

ನವದೆಹಲಿ: 2024ರ ಲೋಕಸಭಾ ಚುನಾವಣೆಯ ಫಲಿತಾಂಶ ಬಿಡುಗಡೆಯಾದ ಹಿನ್ನೆಲೆಯಲ್ಲಿ, ನರೇಂದ್ರ ಮೋದಿಯವರು ಸನ್ಮಾನ್ಯ ರಾಷ್ಟ್ರಪತಿಗಳನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಅದೇ ರೀತಿಯಾಗಿ ತಮ್ಮ ಮಂತ್ರಿ ಮಂಡಲವನ್ನು ರದ್ದು ಮಾಡುವಂತೆ ರಾಷ್ಟ್ರಪತಿಗಳಿಗೆ ಮನವಿ ಮಾಡಿದ್ದಾರೆ.
ಮೋದಿ 3.0 ಸರ್ಕಾರ ರಚನೆಗೆ ವೇದಿಕೆ ಸಿದ್ಧವಾಗಿದ್ದು, ಜೂನ್ 08ಕ್ಕೆ ಮುಹೂರ್ತ ನಿಗದಿ ಮಾಡಲಾಗಿದೆ. ರಾಷ್ಟ್ರಪತಿಗಳಿಂದ ಪ್ರಮಾಣವಚನ ಪಟಣ ಮಾಡಲು ಸಿದ್ಧರಾಗಿದ್ದಾರೆ ನರೇಂದ್ರ ಮೋದಿ.
ಈ ಬಾರಿ ಒಟ್ಟು 293 ಸ್ಥಾನಗಳನ್ನು ಗಳಿಸಿದ ಎನ್‌ಡಿಎ ಮೈತ್ರಿಕೂಟ. ತಮ್ಮ ಪ್ರಧಾನಿ ಎಂದು ನರೇಂದ್ರ ಮೋದಿಯವರಿಗೆ ಬೆಂಬಲ ಸೂಚಿಸಿದ್ದಾರೆ. 1962ರಂತೆ ಸತತ ಮೂರನೇ ಬಾರಿ ಸರ್ಕಾರ ರಚಿಸುತ್ತಿರುವ ಪಕ್ಷ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಭಾರತೀಯ ಜನತಾ ಪಕ್ಷ.