ʼಗೃಹಲಕ್ಷ್ಮಿʼ ಯೋಜನೆಗೆ ಒಂದು ವರ್ಷ: ರೀಲ್ಸ್ ಮೂಲಕ ನಿಮ್ಮ ಅನುಭವ ಹಂಚಿಕೊಳ್ಳಿ ಹಾಗೂ ಬಹುಮಾನ ಗೆಲ್ಲಿ!
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ʼಗೃಹಲಕ್ಷ್ಮಿʼ ಯೋಜನೆ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ್ದು, ಈ ಸಂಭ್ರಮವನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ. ಮಹಿಳೆಯರಿಗೆ ಶಕ್ತಿ ನೀಡಿದ ಈ ಯೋಜನೆ, ರಾಜ್ಯದ ಲಕ್ಷಾಂತರ ಮಹಿಳೆಯರ ಜೀವನದಲ್ಲಿ ಮಹತ್ತರ ಬದಲಾವಣೆಯನ್ನು ತಂದಿದೆ.
ವೀಡಿಯೋ ರೀಲ್ಸ್ ಮೂಲಕ ಸಂಭ್ರಮ ಹಂಚಿಕೊಳ್ಳಲು ಆಹ್ವಾನ:
“ಗೃಹಲಕ್ಷ್ಮಿ ಯೋಜನೆಯಿಂದ ನಿಮ್ಮ ಜೀವನದಲ್ಲಿ ಎಂತಹ ಬದಲಾವಣೆಗಳಾಗಿವೆ ಎಂಬುದನ್ನು ತಿಳಿದುಕೊಳ್ಳಲು ಕಾತುರಳಾಗಿದ್ದೇನೆ. ಸೆಪ್ಟೆಂಬರ್ 30 ರವರೆಗೆ ನಿಮ್ಮ ಅನುಭವಗಳನ್ನು ವಿಡಿಯೋ ರೀಲ್ಸ್ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಿ. ಯಾವ ರೀಲ್ಸ್‌ಗಳು ಹೆಚ್ಚಿನ ವೀಕ್ಷಣೆಗಳನ್ನು (Views) ಪಡೆದುಕೊಳ್ಳುತ್ತವೆಯೋ ಅಂತಹ ರೀಲ್ಸ್‌ಗಳಿಗೆ ವೈಯಕ್ತಿಕವಾಗಿ ಬಹುಮಾನ ವಿತರಿಸಲಾಗುವುದು” ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಘೋಷಿಸಿದ್ದಾರೆ.
ಹೆಚ್ಚುವರಿ ಪ್ರೋತ್ಸಾಹ:
ಈ ಯೋಜನೆ ಮನೆಯೊಡತಿಯರಿಗೆ ಆರ್ಥಿಕ ಸ್ವಾವಲಂಬನೆಯೊಂದಿಗೆ, ಉತ್ತಮ ಜೀವನಮಟ್ಟ ನೀಡುವುದರೊಂದಿಗೆ, ಅನೇಕ ಕುಟುಂಬಗಳಲ್ಲಿ ನವಚೈತನ್ಯ ಹುಟ್ಟಿಸಿದೆ. ಯೋಜನೆಯ ಪ್ರಯೋಜನಗಳನ್ನು ಪಡೆದು ಮುನ್ನಡೆದ ಮಹಿಳೆಯರು ತಮ್ಮ ಅನುಭವಗಳನ್ನು ಹಂಚಿಕೊಳ್ಳುವ ಮೂಲಕ, ಪ್ರೇರಣಾದಾಯಕ ಕಥೆಗಳ ಭಾಗವಾಗುವ ಅವಕಾಶವನ್ನು ಯೋಜನೆ ನೀಡುತ್ತಿದೆ.
ಭಾಗವಹಿಸಿ ಮತ್ತು ಬಹುಮಾನ ಗೆಲ್ಲಿ:
ಈ ವಿಶೇಷ ಅಭಿಯಾನದಲ್ಲಿ ಭಾಗವಹಿಸಿ, ನಿಮ್ಮ ಅನುಭವಗಳನ್ನು ಹಂಚಿಕೊಳ್ಳಿ ಮತ್ತು ಬಹುಮಾನ ಗೆಲ್ಲುವ ಅವಕಾಶವನ್ನು ಪಡೆಯಿರಿ. ಸರ್ಕಾರದ ಈ ಅಭಿಯಾನ ಮಹಿಳಾ ಸಬಲೀಕರಣದತ್ತ ದೊಡ್ಡ ಹೆಜ್ಜೆಯಾಗಿದ್ದು, ಸಾಮಾಜಿಕ ಮಾಧ್ಯಮಗಳ ಮೂಲಕ ಮಹಿಳೆಯರ ಅನುಭವಗಳನ್ನು ಹಂಚಿಕೊಳ್ಳಲು ವೇದಿಕೆ ಕಲ್ಪಿಸಿದೆ.